
ರಾಯಚೂರು : ಹಲ್ಲಿ ಬಿದ್ದ ಬಿಸಿ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ರಾಯಚೂರು ತಾಲೂಕಿನ ಅಪ್ಪನದೊಡ್ಡಿ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ಪಾಲಕರು ಆತಂಕಗೊಂಡು ಶಾಲೆಯ ಮುಂದೆ ಜಮಾವಣೆಗೊಂಡ ಘಟನೆ ನಡೆದಿದೆ.
ಹೌದು ಶಾಲೆಯಲ್ಲಿ ಮಕ್ಕಳಿಗಾಗಿ ಮಧ್ಯಾಹ್ನ ಬಿಸಿಯೂಟಕ್ಕೆ ಉಪ್ಪಿಟ್ಟು ಮಾಡಿದ್ದರು. ಅದನ್ನು ಎಲ್ಲ ಮಕ್ಕಳಿಗೆ ಬಡಿಸಲಾಗಿತ್ತು. ಪಾತ್ರೆಯ ಅಡಿಯಲ್ಲಿ ಸತ್ತ ಹಲ್ಲಿಯೊಂದು ಪತ್ತೆಯಾಗಿದೆ. ಅಷ್ಟರಲ್ಲಾಗಲಿ ಹಲವು ಮಕ್ಕಳು ಉಪ್ಪಿಟ್ಟು ತಿಂದ ಹಲವು ಮಕ್ಕಳಿಗೆ ಹೊಟ್ಟೆ ತೊಳೆಸಲು ಆರಂಭವಾಯಿತು. ಬಳಿಕ ಕೆಲವು ಮಕ್ಕಳು ವಾಂತಿ ಮಾಡಲು ಶುರು ಮಾಡಿದರು. ಅವರ ಪೈಕಿ ಮೂರು ಮಕ್ಕಳು ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ಯಾಪಲದಿನ್ನಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಶಾಲೆಯಲ್ಲಿ ಇಬ್ಬರು ಅಡುಗೆ ಸಿಬ್ಬಂದಿ ಇದ್ದು ಅವರ ನಿರ್ಲಕ್ಷದಿಂದ ಈ ಘಟನೆ ನಡೆದಿದೆ ಎಂದು ಆಪಾದಿಸಲಾಗಿದೆ. ಸ್ಥಳಕ್ಕೆ ಯಾಪಲದಿನ್ನಿ ಪೊಲೀಸರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು ಸಿಬ್ಬಂದಿಗಳ ವಿಚಾರಣೆ ನಡೆಸಿದ್ದಾರೆ. ಶಾಲೆಯ ಆವರಣದಲ್ಲಿ ವೈದ್ಯರು ಮೊಕ್ಕಾಂ ಹೂಡಿದ್ದು ಶಾಲೆಯ ಕ್ಯಾಂಪಸ್‌ನಲ್ಲಿ ಪೋಷಕರು ಕೂಡಾ ಜಮಾಯಿಸಿದ್ದಾರೆ. ಎಲ್ಲ ಮಕ್ಕಳ ಆರೋಗ್ಯದ ಮೇಲೆ ವೈದ್ಯರು ನಿಗಾ ಇಟ್ಟಿದ್ದಾರೆ. ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತಿರುವುದಾಗಿ ಇಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
![]() |
![]() |
![]() |
![]() |
![]() |
[ays_poll id=3]