
K2 ನ್ಯೂಸ್ ಡೆಸ್ಕ್ : ತೀವ್ರ ವಿದ್ಯುತ್ ಕ್ಷಾಮದ ಹಿನ್ನೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಲೋಡ್ ಶೆಡ್ಡಿಂಗ್ ಶುರುವಾಗಿದ್ದು, ರಾಜ್ಯ ಕತ್ತಲೆಯಲ್ಲಿ ಮುಳುಗಿದೆ. 3,000 ಮೆಗಾವ್ಯಾಟ್ ಕೊರತೆ ಸರಿದೂಗಿಸಲು ವಿದ್ಯುತ್ ಕಡಿತ ಮಾಡಲಾಗುತ್ತಿದ್ದು, ಜನ ಬೆಳಕಿಗಾಗಿ ಪರದಾಡುವಂತಾಗಿದೆ. ಮಳೆಗಾಲದಲ್ಲೇ ವಿದ್ಯುತ್ ಕಡಿತ ಮಾಡುತ್ತಿರುವುದರಿಂದ ಮುಂದಿನ ಬೇಸಿಗೆ ನೆನೆದು ಜನ ಈಗಲೇ ಆತಂಕಪಡುತ್ತಿದ್ದಾರೆ.
ಸರ್ಕಾರ ರಾಜ್ಯದಲ್ಲಿ ಅಘೋಷಿತವಾಗಿ ಲೋಡ್ ಶೆಡ್ಡಿಂಗ್ ನಡೆಸುತ್ತಿದೆ. ಮಳೆ ಕೊರತೆಯಿಂದಾಗಿ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಪರಿಣಾಮ ಬೀರುತ್ತಿದೆ. ಇತ್ತ ಬೇಡಿಕೆಯಷ್ಟು ವಿದ್ಯುತ್ ಈಡೇರಿಸಲು ಕಷ್ಟವಾಗುತ್ತಿದೆ ಎನ್ನಲಾಗಿದೆ. ಹಾಗಾಗಿ ಸರ್ಕಾರ ವಿದ್ಯುತ್ ಬಳಕೆಯನ್ನು ಕಡಿತಗೊಳಿಸುವ ನಿರ್ಧಾರ ಮಾಡುತ್ತಿದೆ. ಒಂದು ತಿಂಗಳ ಹಿಂದೆ 8,000 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇತ್ತು, ಅದೂ 16,000ಕ್ಕೆ ಏರಿಕೆಯಾಗಿದೆ. ಈ ಕಾರಣದಿಂದ ಗೃಹಜ್ಯೋತಿ ಯೋಜನೆಗೂ ಹೊಡೆತ ಬೀಳಲಿದೆ ಎಂದು ಚರ್ಚೆಯಾಗುತ್ತಿದೆ.
![]() |
![]() |
![]() |
![]() |
![]() |
[ays_poll id=3]