
ಸಿಂಧನೂರು : ಜೆಡಿಎಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಮಹಿಳೆಯರ ಸ್ವಸಹಾಯ ಸಂಘ ಗುಂಪುಗಳ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಜೆಡಿಎಸ್ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಶಾಸಕ ವೆಂಕಟರಾವ ನಾಡಗೌಡರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದಾಗ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮಯದಲ್ಲಿ ರೈತ ಸಾಲ ಮನ್ನಾ ಮಾಡಿದಂತೆ ಮಹಿಳೆಯರ ಸ್ವಸಹಾಯ ಸಂಘಗಳ ಗುಂಪುಗಳ ಸಾಲ ಮನ್ನಾ ಮಾಡುವದಾಗಿ, ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿಯವರು ಹೇಳಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಸರ್ಕಾರ ಅಧಿಕಾರಾವಧಿಯಲ್ಲಿ ಪ್ರತಿಯೊಂದು ಕೆಲಸಕ್ಕೂ ಕಮೀಷನ್ ಪಡೆಯುವ ಮೂಲಕ ಭ್ರಷ್ಟಾಚಾರ ತಾಂಡಾ ವಾಡುತ್ತಿದೆ ಎಂದು ಆರೋಪಿಸಿದ ಅವರು, ಯುವಕ, ಯುವತಿಯರು ಉದ್ಯೋಗ ಇಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಪ್ರತಿಯೊಂದು ಜಿಲ್ಲೆಯಲ್ಲಿ ಸುಮಾರು ಒಂದು ಲಕ್ಷ ಯುವಕ, ಯುವತಿಯರಿಗೆ ಉದ್ಯೋಗ ನೀಡುವ ಮೂಲಕ ಅವರು ಸ್ವಾಭಿಮಾನದ ಬದುಕು ಸಾಗಿಸಲು ಸೌಲಭ್ಯ ಕಲ್ಪಿಸಲಾಗುತ್ತದೆ ಎಂದರು.
![]() |
![]() |
![]() |
![]() |
![]() |
[ays_poll id=3]