
ಸಿಂಧನೂರು : ಸಿಂಧನೂರು ನಗರದ ನಗರ ಅಭಿವೃದ್ಧಿಯ ಯೋಜನಾಧಿಕಾರಿ ಶರಣಪ್ಪ ಮಡಿವಾಳ ಮನೆಯ ಮೇಲೆ ಲೋಕಾಯುಕ್ತ ದಾಳಿ ಪರಿಶೀಲನೆ.
ಸಿಂಧನೂರು ನಗರ ಅಭಿವೃದ್ಧಿ ಪ್ರಾಧಿಕಾರದ ಯೋಜನಾಧಿಕಾರಿಯಾಗಿದ್ದ, ಶರಣಪ್ಪ ಮಡಿವಾಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು ಪರಿಶೀಲನೆ ನಡೆಸಿದ್ದಾರೆ. ಸಿಂಧನೂರು ನಗರದ ಧರ್ಮ ಅಪಾರ್ಟ್ಮೆಂಟ್ನಲ್ಲಿ ಇರುವ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಇನ್ನು ನಗರ ಅಭಿವೃದ್ಧಿ ಯೋಜನೆ ಅಧಿಕಾರಿ ಕಚೇರಿ ಮುಂದೆ ಲೋಕಾಯುಕ್ತ ಅಧಿಕಾರಿಗಳು ಆಗಮಿಸಿದ್ದಾರೆ. ನಿವಾಸದ ಮೇಲೆ ಈಗಾಗಲೇ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದು ವಿವಿಧ ದೂರುಗಳ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ.
ಲೋಕಾಯುಕ್ತ ಅಧಿಕಾರಿಗಳು ಕಲಬುರ್ಗಿ, ರಾಯಚೂರು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
![]() |
![]() |
![]() |
![]() |
![]() |
[ays_poll id=3]