This is the title of the web page
This is the title of the web page
Local News

ಭ್ರಷ್ಟ ಅಧಿಕಾರಿ ಲೋಕಾಯುಕ್ತ ಬಲೆಗೆ 45,000 ಲಂಚಕ್ಕೆ ಬೇಡಿಕೆ


ರಾಯಚೂರು : ನಗರ ನೈರ್ಮಲ್ಯ ಕಾರ್ಯಕ್ಕೆ ಗುತ್ತಿಗೆ ಪಡೆದ ಟ್ರ್ಯಾಕ್ಟರ್ ಬಿಲ್ ಪಾವತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಗರ ನೈರ್ಮಲ್ಯ ಅಭಿಯಂತರ ಅಧಿಕಾರಿ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ.

ಹೌದು ರಾಯಚೂರು ನಗರಸಭೆ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು, ನಗರಸಭೆ ನೈರ್ಮಲ್ಯ ಅಭಿಯಂತರ ಮಲ್ಲಿಕಾರ್ಜುನ ಎಂಬುವ ಅಧಿಕಾರಿ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಾರೆ. ಭಗತ್‌ಸಿಂಗ್ ಎಂಬುವ ಟ್ರ್ಯಾಕ್ಟರ್ ಮಾಲೀಕ ತಮ್ಮ ಬಾಕಿ ಇರುವ ಬಿಲ್ ಪಾವತಿ ಮಾಡಲು ಮನವಿ ಮಾಡಿದ್ದರು. ಆದರೆ ಅಧಿಕಾರಿ ಈ ಒಂದು ಬಿಲ್ ಪಾವತಿ ಮಾಡಲು 45,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸತ್ತಿದ್ದ ಟ್ರ್ಯಾಕ್ಟರ್ ಮಾಲೀಕ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರಿನ ಹಿನ್ನೆಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ನಗರಸಭೆ ಕಾರ್ಯಾಲಯ ಪರಿಶೀಲನೆ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಅಧಿಕಾರಿ ಮಲ್ಲಿಕಾರ್ಜುನ್ ಅವರನ್ನ ನ್ಯಾಯಾಂಗ ಬಂಧನಕ್ಕೆ ಪಡೆದಿದ್ದಾರೆ..


[ays_poll id=3]