
ಲಿಂಗಸುಗೂರು : ಹುಚ್ಚು ನಾಯಿಯೊಂದು ನಾಲ್ಕು ಚಿಕ್ಕ ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿ ಗಾಯಗೊಳಿಸಲು ಘಟನೆ ಹಟ್ಟಿ ಪಟ್ಟಣದಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಘಟನೆ ಜರುಗಿದ್ದು, ಗಾಯಾಳುಗಳನ್ನು ಹಟ್ಟಿ ಚಿನ್ನದ ಗಣಿ ಆಸ್ಪತ್ರೆ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಗೊಂಡ ಜನರಿಗೆ ಚಿಕಿತ್ಸೆ ಮುಂದುವರಿದಿದೆ. ಇನ್ನು ಪಟ್ಟಣದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು ಇವುಗಳನ್ನು ನಿಯಂತ್ರಿಸಬೇಕಿದೆ ಎಂಬುದು ಸಾರ್ವಜನಿಕರ ಮಾತಾಗಿದೆ. ಸಂಬಂಧಪಟ್ಟ ಪಟ್ಟ ಪಂಚಾಯಿತಿ ಅಧಿಕಾರಿಗಳು ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ.
ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿರುವ ನಾಯಿಗಳನ್ನು ಹಿಡಿದು, ಊರಿನಿಂದ ಆಚೆಗೆ ಅಥವಾ ಬೇರೆಡೆಗೆ ಸಾಗಿಸಬೇಕಿದೆ ಎಂಬುದು ಸ್ಥಳೀಯರ ಒತ್ತಾಯವಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ಅಧಿಕಾರಿಗಳು ಗಾಯಾಳುಗಳನ್ನ ಮಾತನಾಡಿಸಿ ಸಾಂತ್ವಾನ ಹೇಳಿದ್ದಾರೆ.
![]() |
![]() |
![]() |
![]() |
![]() |
[ays_poll id=3]