
ರಾಯಚೂರು : ಅಪರಿಚಿತ ವಾಹನ ಬೈಕ್ ಗೆ ಸವಾರನಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಜರ್ಲಾ ಗ್ರಾಮದ ಬಳಿ ನಡೆದಿದೆ.
ರಾಯಚೂರು ತಾಲೂಕಿನ ಹೆರಿಗೆರ ರಸ್ತೆ ಮಂಜರ್ಲಾ ಗ್ರಾಮದ ಬಳಿ ಘಟನೆ ನಡೆದಿದೆ. ರಸ್ತೆಯಲ್ಲಿ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರಣೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಯರಗೇರಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಸ್ತುತ ಮೃತನ ಬಗೆ ಯಾವುದೇ ಮಾಹಿತಿ ತಿಳಿದಿಲ್ಲ. ಮೃತಪಟ್ಟ ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನು ಡಿಕ್ಕಿ ಹೊಡೆದ ಅಪರಿಚಿತ ವಾಹನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
![]() |
![]() |
![]() |
![]() |
![]() |
[ays_poll id=3]