This is the title of the web page
This is the title of the web page
Local News

ಮಾ.19 ಖಾಸಗಿ ಶಿಕ್ಷಣ ಸಂಸ್ಥೆಗಳ ಉದ್ಯೋಗ ಮೇಳ


ರಾಯಚೂರು : ರಾಯಚೂರು ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಒಕ್ಕೂಟ ವತಿಯಿಂದ ಮಾರ್ಚ್ 19 ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರದಾನ ಕಾರ್ಯದರ್ಶಿ ಡಿ.ಕೆ. ಮುರಳಿಧರ ಹೇಳಿದರು.

ಮೇಳವನ್ನು ನಗರದ ವೀರಶೈವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆ ವರೆಗೆ ಉದ್ಯೋಗ ಮೇಳ ನಡೆಯುತ್ತದೆ ಎಂದ ಅವರು, ಪ್ರತಿಯೊಂದು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರುವುದರಿಂದ ಈ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ 120 ಕ್ಕೂ ಹೆಚ್ಚು ಖಾಸಗಿ ಶಿಕ್ಷಣ ಸಂಸ್ಥೆಗಳು ಭಾಗವಹಿಸಲಿವೆ.ಈ ಮೇಳವನ್ನು ಕಿಲ್ಲೇ ಬೃಹನ್ಮಠದ ಶಂತಾಮಲ್ಲ ಶಿವಾಚಾರ್ಯ ಮಹಾಸ್ವಾಮಿಗಳು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶರಣಗೊಲಪ ನಾಡಗೌಡ ಅವರು ವಹಿಸಲಿದ್ದಾರೆ ಎಂದರು


[ays_poll id=3]