This is the title of the web page
This is the title of the web page
Politics News

ಸಿಂಧನೂರಿನಲ್ಲಿ ಪ್ರಧಾನಿ ಮೋದಿ ಮೇ 2ರಂದು ಬೃಹತ್ ಸಮಾವೇಶ


ರಾಯಚೂರು: ವಿಧಾನಸಭೆ ಚುನಾವಣೆ  ಪ್ರಚಾರದ ಭರಾಟೆ ಜೋರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ನಾಯಕತ್ವದ ವರ್ಚಸ್ಸನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಂಡು ರಾಜ್ಯದಲ್ಲಿ ಮರಳಿ ಅಧಿಕಾರದ ಗದ್ದುಗೆಗೆ ಏರಬೇಕೆಂಬ ಹಂಬಲದಲ್ಲಿ ಬಿಜೆಪಿ ಇದೆ.

ಬಿಜೆಪಿ ಈವರೆಗೆ ಖಾತೆ ತೆರೆಯದ ಕ್ಷೇತ್ರದಲ್ಲೇ ಮೋದಿ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಸಲು ಬಿಜೆಪಿ ಮುಂದಾಗಿದೆ. ಮೇ 2ರಂದು‌ ಮೋದಿ ಅವರು ರಾಯಚೂರಿಗೆ ಆಗಮಿಸಲಿದ್ದು, ಸಿಂಧನೂರು ಕ್ಷೇತ್ರದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಿಂಧನೂರು ತಾಲ್ಲೂಕು ಹೊಸಳ್ಳಿ ಗ್ರಾಮದ ಹೊರವಲಯದಲ್ಲಿ ಸಮಾವೇಶ ನಡೆಯಲಿದೆ. ಒಟ್ಟು 20 ಎಕರೆ ಪ್ರದೇಶದಲ್ಲಿ ಸಮಾವೇಶ ನಡೆಯಲಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ರಾಯಚೂರು ಗಡಿಯ ಕೊಪ್ಪಳ, ಬಳ್ಳಾರಿ ಭಾಗದ ಕ್ಷೇತ್ರಗಳಿಗೂ ಅನಕೂಲವಾಗುವ ನಿಟ್ಟಿನಲ್ಲಿ ಸಮಾವೇಶದ ಸ್ಥಳ ನಿಗದಿಪಡಿಸಲಾಗಿದೆ. ಸುಮಾರು 5-6 ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. ಈ ಹಿಂದಿನ ನಾಲ್ಕು ಚುನಾವಣೆಗಳಲ್ಲಿ ಒಂದು ಬಾರಿ ಕಾಂಗ್ರೆಸ್‌ ಗೆದ್ದರೆ ಮತ್ತೂಂದು ಬಾರಿ ಜೆಡಿಎಸ್‌ ಗೆದ್ದುಕೊಂಡು ಬಂದಿರುವುದು ಸಿಂಧನೂರು ಕ್ಷೇತ್ರ ವಿಶೇಷ. ಈ ಲೆಕ್ಕಾಚಾರದ ಪ್ರಕಾರ ಈ ಬಾರಿ ಕಾಂಗ್ರೆಸ್ ಗೆಲುವು ಸಾಧಿಸಬೇಕು. ಆದರೆ ಸದ್ಯದ ರಾಜಕೀಯ ಚಿತ್ರಣ ಬದಲಾಗಿದ್ದು, ಬಿಜೆಪಿಯೂ ಪ್ರಬಲ ಪೈಪೋಟಿ ಒಡ್ಡುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.


[ays_poll id=3]