K2kannadanews.in
Corporation 187 core ರಾಯಚೂರು : ಮಹರ್ಷಿ ವಾಲ್ಮೀಕಿ (Maharishi valmiki) ಅಭಿವೃದ್ಧಿ ನಿಗಮದಲ್ಲಿನ 187 ಕೋಟಿ ಭ್ರಷ್ಟಾಚಾರ (Corporation) ವಿಚಾರಕ್ಕೆ ಸಂಬಂಧಿಸಿದಂತೆ ನಿಷ್ಕಾಳಜಿ ಹೇಳಿಕೆ (Lazy statement) ನೀಡಿರುವ ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿಯ ಅಧ್ಯಕ್ಷರಾದ ಆಗಿರುವ ಶಾಸಕ ಬಸನಗೌಡ ದದ್ದಲ್ (Basangoda daddl) ರಾಜೀನಾಮೆ ನೀಡಬೇಕು ಎಂದು ಸರ್ವೋದಯ ಕರ್ನಾಟಕ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಚಾಮರಸ ಮಾಲಿಪಾಟೀಲ ಒತ್ತಾಯಿಸಿದರು.
ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿಯಲ್ಲಿ ₹187 ಕೋಟಿ ಭ್ರಷ್ಟಾಚಾರ ನಡೆದಿದ್ದು, ಅಧ್ಯಕ್ಷರ ಭಾಗಿಯಾಗಿರದೇ ಇರಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ಪರಿಶಿಷ್ಟ ಪಂಗಡ ಸಚಿವ ಬಿ.ನಾಗೇಂದ್ರ (B nagendra) ರಾಜೀನಾಮೆ ನೀಡಿದ್ದು, ಹಲವು ನಿಗಮಗಳಲ್ಲಿಯೂ ಕೂಡ ಭಾರಿ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ (CM siddaramayya) ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.
ಮುಖ್ಯವಾಗಿ ಪರಿಶಿಷ್ಟ ಪಂಗಡ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣ ದುರ್ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಬಂಧಿಸಿ ಸಮಾಜದ ಶಾಸಕರು (MLA raise a voice) ಧ್ವನಿ ಎತ್ತಬೇಕು. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಅಚಾತುರ್ಯವಲ್ಲ. ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದರು. ನಿಗಮದ ಅಧ್ಯಕ್ಷರಾದ ಬಸನಗೌಡ ದದ್ದಲ್ ಅವರು ಕೂಡ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.