
ರಾಯಚೂರು : ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಬಂದ ಮೋದಿ, ಈ ಹಿಂದೆ ಯಡಿಯೂರಪ್ಪ ಸಿಎಂ ಇದ್ದಾಗ ಅವರನೇ ಆಹ್ವಾನಿಸಿರಲಿಲ್ಲ ಎಂದು ಸಣ್ಣ ನೀರಾವರಿ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜ್ ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಚಂದ್ರಯಾನ 3 ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡಿಂಗ್ ಆಗುತ್ತಿದ್ದಂತೆ, ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಇಸ್ರೋ ಕಚೇರಿಗೆ ಅಭಿನಂದನೆ ಸಲ್ಲಿಸಿದರು. ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾವು ಎಲ್ಲರೂ ತೆರಳಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿ, ಒಂದು ಗಂಟೆಗಳ ಕಾಲ ಸಮಯ ಕಳೆದಿದ್ದೇವೆ. ಚಂದ್ರಯಾನ 3 ಯಶಸ್ವಿಗೆ ಶ್ರಮಿಸಿದ ಎಲ್ಲಾ ವಿಜ್ಞಾನಿಗಳಿಗೂ ವಿಧಾನಸೌಧದ ಬ್ಯಾಂಕ್ವಿಟ್ ಹಾಲಿನಲ್ಲಿ ಸನ್ಮಾನಿಸಲು ಆಹ್ವಾನಿಸಿದ್ದೇವೆ ಎಂದು ಹೇಳಿದರು.
ಇಂದು ಬೆಳಿಗ್ಗೆ ಇಸ್ರೋ ಕಚೇರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ರಾಜ್ಯದ ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿಗಳಿಗೆ ಆಹ್ವಾನಿಸಬಹುದಿತ್ತು. ಆಹ್ವಾನಿಸಿದ್ದರೆ ನಾವು ಯಾರಾದರೂ ಒಬ್ಬರು ಸರ್ಕಾರದ ಪರವಾಗಿ ಭಾಗವಹಿಸುತ್ತಿದ್ದೆವು. ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯ ಮಂತ್ರಿಗಳಾಗಿದ್ದಾಗ ಅವರನ್ನೇ ಆಹ್ವಾನಿಸಲಿಲ್ಲ ಎಂದು ಹೇಳಿದರು.
![]() |
![]() |
![]() |
![]() |
![]() |
[ays_poll id=3]