This is the title of the web page
This is the title of the web page
State News

200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸಿದ್ರೆ ಅರ್ಜಿ ರಿಜೆಕ್ಟ್


K2 ನ್ಯೂಸ್ ಡೆಸ್ಕ್ : ಗೃಹಜ್ಯೋತಿ ಯೋಜನೆಗೆ 1.43 ಕೋಟಿ ಗ್ರಾಹಕರು ಅರ್ಜಿ ಸಲ್ಲಿಸಿದ್ದು, 200 ಯೂನಿಟ್ ಒಳಗೆ ವಿದ್ಯುತ್ ಬಳಸಿದ್ರೆ ಮಾತ್ರ ಬಿಲ್ ಪಾವತಿಸುವಂತಿಲ್ಲ. ಒಂದು ವರ್ಷದ ಸರಾಸರಿ ವಿದ್ಯುತ್ ಬಿಲ್ ಪರಿಗಣಿಸಿ ಉಚಿತ ವಿದ್ಯುತ್ ನೀಡಲಾಗುತ್ತೆ. 200 ಯೂನಿಟ್ ಗಿಂತ ಹೆಚ್ಚು ಬಳಸಿದರೆ ಅರ್ಜಿ ರಿಜೆಕ್ಟ್ ಆಗಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ..

ಜುಲೈ ತಿಂಗಳಿನಲ್ಲಿ ನಿಗದಿತ ವಿದ್ಯುತ್ ಬಳಕೆ ಮಾಡಿದ ಗೃಹಬಳಕೆ ಗ್ರಾಹಕರಿಗೆ ಇಂದಿನಿಂದ ಶೂನ್ಯ ಬಿಲ್ ವಿತರಣೆ ಶುರುವಾಗಲಿದೆ. ಜುಲೈ 1 ರಿಂದ ಬಳಕೆಯಾದ ಗೃಹಬಳಕೆ ವಿದ್ಯುತ್ ಗೆ ಗ್ರಾಹಕರು ಕಳೆದ ಒಂದು ವರ್ಷದ ಸರಾಸರಿ ವಿದ್ಯುತ್ ಬಳಕೆ ಆಧರಿಸಿ ಅದಕ್ಕಿಂತ ಶೇಕಡ 10ರಷ್ಟು ಹೆಚ್ಚಿನ ವಿದ್ಯುತ್ ಉಚಿತವಾಗಿ ಪಡೆದುಕೊಳ್ಳಬಹುದು. ಜುಲೈ 27ರೊಳಗೆ ನೋಂದಾಯಿಸಿದ ಗ್ರಾಹಕರಿಗೆ ಈ ಸೌಲಭ್ಯ ಸಿಗಲಿದೆ.

ಜೂನ್ ತಿಂಗಳಿನ ವಿದ್ಯುತ್ ಬಿಲ್ನಲ್ಲಿ ಜುಲೈ ತಿಂಗಳ ಕೆಲವು ದಿನಗಳ ಶುಲ್ಕ ಕೂಡ ಸೇರ್ಪಡೆಯಾಗಿದ್ದರೆ ಹೆಚ್ಚುವರಿ ದಿನಗಳ ಹಣ ನಿಮಗೆ ಮರುಪಾವತಿಯಾಗಲಿದೆ ಎಂದರು. ಜೂನ್ ತಿಂಗಳ ವಿದ್ಯುತ್ ಬಿಲ್ನಲ್ಲಿ ಸ್ವಲ್ಪ ಗೊಂದಲಗಳಿತ್ತು. ಆ ತಿಂಗಳ ಬಿಲ್ನಲ್ಲಿ ಜುಲೈ ತಿಂಗಳ ಕೆಲವು ದಿನಗಳು ಸೇರಿಕೊಂಡಿವೆ. ಅಂತಹ ಗ್ರಾಹಕರಿಗೆ ಕ್ರೆಡಿಟ್ ಕೊಡುತ್ತೇವೆ. ಬಾಕಿ ಮೊತ್ತ ಇಲ್ಲದಿದ್ದರೆ ನಾಲ್ಕು ತಿಂಗಳ ಬಳಿಕ ಹಣ ಹಿಂದಿರುಗಿಸುತ್ತೇವೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.


[ays_poll id=3]