This is the title of the web page
This is the title of the web page
Crime NewsState News

ಹೆತ್ತ ಮಗುವನ್ನು ಕೊಂದು ಸೂಟ್‌ ಕೇಸ್‌ ನಲ್ಲಿ ಸಾಗಿಸುತ್ತಿದ್ದ ಸಿಇಒ ಸೆರೆ..?


K2kannadanews.in

Crime News : ನವೋದ್ಯಮ(Startup) ಕಂಪನಿ ಒಂದರ ಸ್ಥಾಪಕಿ ಹಾಗೂ ಸಿಇಒ ಸುಚನಾ ಸೇಠ್‌ ರನ್ನು ಶಿಶುಹತ್ಯೆ (Murder of child) ಆರೋಪದ ಮೇಲೆ ಬಂಧಿಸಲಾಗಿದೆ. ಗೋವಾದ (Goa) ಕಾಂಡೋಲಿಮ್‌ (Condolim) ಉತ್ತರ ಗೋವಾದಿಂದ ಕರ್ನಾಟಕಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಸುಚನಾ ಸೇಠ್‌ ಬಂಧನಕ್ಕೊಳಗಾಗಿದ್ದಾಳೆ.

ಹೌದು ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಸುಚನಾ ಅವರು ಗೋವಾದ ಹೋಟೆಲ್​ನಲ್ಲಿ (Goq Hotel) ಉಳಿದುಕೊಂಡಿದ್ದರು. ಇನ್ನೇನು ಹೋಟೆಲ್​ನಿಂದ ಬೆಂಗಳೂರಿಗೆ (Benglore) ಹೋಗಲು ತಮ್ಮ ಸೂಟ್ ಕೇಸ್ ಹಿಡಿದು ಟ್ಯಾಕ್ಸಿಯತ್ತ (Taxi) ಹೊರಟಾಗ ಹೋಟೆಲ್ ಸಿಬ್ಬಂದಿ ನಿಮ್ಮ ಜೊತೆ ಬಂದಿದ್ದ ಮಗು ಎಲ್ಲಿ ಎಂದು ವಿಚಾರಿಸಿದ್ದಾರೆ. ಆಗ ಸುಚನಾ ಅವರು ಸಂಬಂಧಿಕರ ಮನೆಗೆ ಕಳಿಸಿದ್ದೇನೆಂದು ಸುಳ್ಳು (Lie) ಹೇಳಿ ಟ್ಯಾಕ್ಸಿ ಮೂಲಕ ಬೆಂಗಳೂರಿನತ್ತ ತೆರಳಿದ್ದಾರೆ. ಈ ವೇಳೆ ಅನುಮಾನಗೊಂಡ ಹೋಟೆಲ್​ನವರು ರೂಮ್  (Room boy) ಸ್ವಚ್ಛಗೊಳಿಸಲು ಹೋಗಿದ್ದು ಅಲ್ಲಿ ರಕ್ತದ (Blood) ಕಲೆಗಳು ಪತ್ತೆ ಆಗಿವೆ. ಇದರಿಂದ ಬೆಚ್ಚಿಬಿದ್ದ ಸಿಬ್ಬಂದಿ ತಕ್ಷಣ ಪೊಲೀಸರಿಗೆ (Police) ಮಾಹಿತಿ ನೀಡಿದ್ದಾರೆ.

ಇನ್ನು ಹೋಟೆಲ್ ಸಿಬ್ಬಂದಿ ಗೋವಾ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಪೊಲೀಸರು ನಂಬರ್ ಹುಡುಕಿ ಸುಚನಾ ಪ್ರಯಾಣಿಸುತ್ತಿದ್ದ ಟ್ಯಾಕ್ಸಿ ಡ್ರೈವರ್​ಗೆ ಕರೆ ಮಾಡಿದ್ದಾರೆ. ಹೈವೇ (Haiway) ಬಳಿ ಪೊಲೀಸ್ ಠಾಣೆ ಕಂಡಾಕ್ಷಣ ಕಾರು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಪೊಲೀಸರ ಸೂಚನೆಯಂತೆ ರಾಷ್ಟ್ರೀಯ ಹೆದ್ದಾರಿ 4ರ ಐಮಂಗಲ ಠಾಣೆ ಬಳಿ ಚಾಲಕ ಟ್ಯಾಕ್ಸಿ ನಿಲ್ಲಿಸಿದ್ದು ಐಮಂಗಲ ಪೊಲೀಸರಿಗೆ ಆರೋಪಿ ಸುಚನಾಳನ್ನು ಒಪ್ಪಿಸಿದ್ದಾರೆ. ಕಾರ್​ನ ಡಿಕ್ಕಿಯಲ್ಲಿದ್ದ ಸೂಟ್ ಕೇಸ್ ನಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ಶವವನ್ನು ಶವಾಗಾರಕ್ಕೆ ಶಿಫ್ಟ್ ಮಾಡಿ ಆರೋಪಿ ಸುಚನಾಳನ್ನ ವಶಕ್ಕೆ ಪಡೆಯಲಾಗಿದೆ.


[ays_poll id=3]