
K2 ಪೊಲಿಟಿಕಲ್ ನ್ಯೂಸ್ : 2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಿಂದ ಇಂಡಿಯಾ ಮೈತ್ರಿಕೂಟಕ್ಕೆ 20 ಸೀಟುಗಳನ್ನು ಗೆಲ್ಲಿಸಿ ಕೊಡುವ ಭರವಸೆ ಕೇಂದ್ರ ನಾಯಕರಿಗೆ ಕೊಟ್ಟಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಒಗ್ಗಟ್ಟು ಹಾಗೂ ಸಾಮೂಹಿಕವಾಗಿ ಲೋಕಸಭಾ ಚುನಾವಣೆಯನ್ನು ಎದುರಿಸುತ್ತೇವೆ. ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಗೆಲುವು ಖಂಡಿತ ಎನ್ನುವ ಸಂದೇಶವನ್ನು ಈಗಾಗಲೇ ನೀಡಿದ್ದೇವೆ. ಇದರಂತೆ ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸುವ ಕುರಿತು ಸಭೆಯಲ್ಲಿ 50 ನಾಯಕರ ಉಪಸ್ಥಿತಿಯಲ್ಲಿ ಚರ್ಚೆ ನಡೆಸಲಾಯಿತು ಎಂದರು.
ನಾವು ಚುನಾವಣೆಗೂ ಮುಂಚೆ ನೀಡಿದ 5 ಗ್ಯಾರಂಟಿಗಳಲ್ಲಿ ಈಗಾಗಲೇ 4 ಗ್ಯಾರಂಟಿಗಳನ್ನು ಈಡೇರಿಸಿದ್ದು, ಅಭೂತಪೂರ್ವ ಯಶಸ್ಸು ಕಂಡಿವೆ. ಪ್ರತಿದಿನ 15 ಲಕ್ಷ ಮಹಿಳೆಯರು ಶಕ್ತಿ ಯೋಜನೆ ಲಾಭ ಪಡೆಯುತ್ತಿದ್ದಾರೆ, 10 ಕೆ.ಜಿ. ಅಕ್ಕಿ ಯೋಜನೆ ಜಾರಿ ಆಗಿದೆ. ಆಗಸ್ಟ್ ತಿಂಗಳಿನಲ್ಲಿ ಶೂನ್ಯ ವಿದ್ಯುತ್ ಬಿಲ್ ಹಾಗೂ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬರಲಿದೆ ಎಂದರು. ಕರ್ನಾಟಕ ಮಾದರಿಯನ್ನು ಜನತೆಗೆ ನೀಡಿ ನಾವು ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದೇವೆ. ಈ ಗೆಲುವಿಗೆ ಕಾರಣರಾದ ಎಲ್ಲರಿಗೂ ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಲಾಯಿತು ಎಂದೂ ತಿಳಿಸಿದರು.
![]() |
![]() |
![]() |
![]() |
![]() |
[ays_poll id=3]