
ರಾಯಚೂರು : ಮುಸ್ಲಿಂ ಸಮುದಾಯದ ವ್ಯಕ್ತಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ 15 ಹಿಂದೂ ಗ್ರಾಮ ಪಂಚಾಯತಿ ಸದಸ್ಯರು ಏಕಕಾಲಕ್ಕೆ ರಾಜೀನಾಮೆ ನೀಡಿದ ಘಟನೆ ರಾಯಚೂರಿನಲ್ಲಿ ಬೆಳಕಿಗೆ ಬಂದಿದೆ.
ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಆರ್‌ಎಚ್ ಕ್ಯಾಂಪ್ 2 ರಲ್ಲಿ ಮುಸ್ಲಿಂ ಧರ್ಮದ ಕೆಲ ಕಿಡಿಗೇಡಿಗಳು ಹಿಂದೂಗಳ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಿರುವ ಸದಸ್ಯರು, ಹೀಗಾಗಿ ಮುಸ್ಲಿಂ ಅಧ್ಯಕ್ಷನನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಅಧ್ಯಕ್ಷ ಪದವಿ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದ್ದರೂ ರಹಮತ್ ಪಾಷಾಗೆ ಅಧ್ಯಕ್ಷಪಟ್ಟ ನೀಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಹಾಗೂ ಜೆಡಿಎಸ್‌ನ 15 ಸದಸ್ಯರು ರಾಜೀನಾಮೆ ನೀಡಿದ್ದಾರೆ.
![]() |
![]() |
![]() |
![]() |
![]() |
[ays_poll id=3]