
ಮಾನ್ವಿ : ಮುಸ್ಟೂರು-ಮಾನ್ವಿ ಸಂಪರ್ಕ ಸೇತುವೆ ಕಾಮಗಾರಿ ನಿರ್ಮಾಣಕ್ಕಾಗಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪಯ್ಯ ನಾಯಕ್ ಅವರು ಸಣ್ಣ ನೀರಾವರಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು.
ಕಳೆದ 3 ವರ್ಷಗಳ ಹಿಂದೆ ಅಧಿಕ ಮಳೆಯಿಂದ ಪ್ರವಾಹ ಉಂಟಾಗಿ ಸೇತುವೆ ಕೊಚ್ಚಿ ಹೋಗಿ, 2 ಗ್ರಾಮಗಳಿಗೆ ಸಂಪರ್ಕ ಕಡಿತವಾಗಿ ರೈತರು ಸೇರಿದಂತೆ ವಿದ್ಯಾರ್ಥಿ, ಸಾರ್ವಜನಿಕರು, ಗ್ರಾಮಸ್ಥರಿಗೆ ಸಾಕಷ್ಟು ತೊಂದರೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸರಕಾರಕ್ಕೆ, ಮನವಿ ಸಲ್ಲಿಸಿದರು ಪ್ರಯೋಜನವಾಗಿರಲಿಲ್ಲ. ಇದೀಗ ಸಚಿವರಾಗಿರುವ ಎನ್ ಎಸ್ ಬೋಸ್ ರಾಜ್ ರವರು ಸ್ಥಳ ಭೇಟಿ ಮಾಡಿ ಪರಿಶೀಲನೆ ಮಾಡಿ, ಅಧಿಕಾರಿಗಳಿಗೆ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಶೀಘ್ರ ಸೇತುವೆಯ ವರದಿ ತಯ್ಯಾರಿಸಿ ನೀಡುವಂತೆ ಸೂಚಿಸಿ ಸೇತುವೆ ಪಕ್ಕದ ರೈತರ ಜಮೀನುಗಳಿಗೆ ತೊಂದರೆಯಾಗದಂತೆ ತಡೆಗೋಡೆ ನಿರ್ಮಿಸಬೇಕೆಂದು ಸಣ್ಣ ನೀರಾವರಿ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರಿಗೆ ಹಾಗೂ ಸಂಬಂದಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
![]() |
![]() |
![]() |
![]() |
![]() |
[ays_poll id=3]