
ರಾಯಚೂರು : ಜೂ.30ರಂದು ನಡೆಯುವ ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಮೂವರು ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಬೋಸರಾಜು ಮತ್ತು ತಿಪ್ಪಣ್ಣ ಕಮಕನೂರು ಅವರಿಗೆ ಟಿಕೆಟ್ ನೀಡಲಾಗಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಇರುವ ಹಿನ್ನೆಲೆ, ಅಭ್ಯರ್ಥಿಗಳ ಗೆಲುವು ಪಕ್ಕಾ ಆಗಿದೆ.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಭಾರತೀಯ ಚುನಾವಣಾ ಆಯೋಗದ ಅಧಿಸೂಚನೆಯ ಪ್ರಕಾರ, ಜೂನ್ 20 (ಮಂಗಳವಾರ) ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಜೂನ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂನ್ 23 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದ್ದು, ಜೂನ್ 30 ರಂದು ಮತದಾನ ಮತ್ತು ಮತ ಎಣಿಕೆ ನಡೆಯಲಿದೆ.
![]() |
![]() |
![]() |
![]() |
![]() |
[ays_poll id=3]