
ಸಿಂಧನೂರು : ದೇಶದ ಅತಿ ದೊಡ್ಡ ಭ್ರಷ್ಟಾಚಾರಿ ಸಿದ್ದರಾಮಯ್ಯ, ಕಳ್ಳರಲ್ಲಿ ಪ್ರಜ್ಞಾವಂತ ಕಳ್ಳ ಯಾರು ಎಂದರೆ ಅದು ಸಿದ್ದರಾಮಯ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಿಂಧನೂರಿನಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಸಿಂಧನೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು 8000 ಕೋಟಿ ಅಕ್ರಮವನ್ನು ಮಾಡಿದ್ದಾರೆ. ಇದು ಹೇಳಿದ್ದು ನಳಿನ್ ಕುಮಾರ್ ಅಲ್ಲ ಸಿದ್ದರಾಮಯ್ಯ ಆಯ್ಕೆ ಮಾಡಿರುವ ನ್ಯಾಯಮೂರ್ತಿ ಕೆಂಪಣ್ಣ ಆಯೋಗವೇ ವರದಿ ಸಲ್ಲಿಸಿದೆ. ಹಾಗಾಗಿ ಈ ದೇಶದ ಅತಿ ದೊಡ್ಡ ಭ್ರಷ್ಟಾಚಾರಿ ಸಿದ್ದರಾಮಯ್ಯ, ಭ್ರಷ್ಟಾಚಾರಕ್ಕೆ ರಾಜ್ಯದಲ್ಲಿ ಇನ್ನೊಂದು ಹೆಸರೇ ಸಿದ್ದರಾಮಯ್ಯ, ಕಳ್ಳರ ಗುರು ಯಾರು ಎಂದರೆ ಅದು ಸಿದ್ದರಾಮಯ್ಯ, ಕಳ್ಳರಲ್ಲಿ ಪ್ರಜ್ಞಾವಂತ ಕಳ್ಳ ಯಾರು ಎಂದರೆ ಅದು ಸಿದ್ದರಾಮಯ್ಯ ಎಂದು ಆರೋಪಿಸಿದರು.
ಇದೆ ವೇಳೆ ಕಾಂಗ್ರೆಸಿನ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಮೇಲೆ ಕಾಂಟ್ರಾಕ್ಟರ್ ಕೆಂಪಣ್ಣ ಅವರ ಮಾತು ಕೇಳಿ 40% ಸರ್ಕಾರ ಅಂತ ಆರೋಪ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಲೋಕಾಯುಕ್ತಕ್ಕೆ ಜೀವ ತುಂಬಿದ್ದೇವೆ. ನಿಮಗೆ ತಾಕತ್ತಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ ನಾವು ಪ್ರಕರಣ ಎದುರಿಸಲು ಸಿದ್ಧರಿದ್ದೇವೆ ಎಂದು ಹೇಳಿದರು.
![]() |
![]() |
![]() |
![]() |
![]() |
[ays_poll id=3]