ರಾಯಚೂರು ಜಿಲ್ಲೆಯ ಮಾನ್ವಿ ನಗರದ ಹೆಚ್‌ಪಿ ಪೆಟ್ರೋಲ್ ಬಂಕ್ ಎದುರು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂತ್ರಾಲಯ ರಾಯರ ದರ್ಶನ ಪಡೆದು ಬಾಗಲಕೋಟೆಗೆ ಹಿಂದಿರುಗುತ್ತಿದ್ದ ವೇಳೆ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆ ಸುಳೇಬಾವಿ ನಿವಾಸಿಗಳಾದ ಕಾರು ಚಾಲಕ ರಾಘವೇಂದ್ರ ಹಾಗೂ ಪ್ರಿಯಾಂಕ ಮೃತಪಟ್ಟಿದ್ದಾರೆ. ಕಾಳಮ್ಮ, ಸವಿತಾ, ಮಧು, ಸೌಮ್ಯ ಮತ್ತು ವಿಜಯ್ ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಮಾನ್ವಿ ಪೊಲೀಸ್ ಠಾಣೆಯ ಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.