LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಸ್ಕಿಯಲ್ಲಿ ಬೈಕಿಗೆ ಹಿಂಬದಿಯಿಂದ ಬುಲೇರೊ ಡಿಕ್ಕಿ: ಮಹಿಳೆ ಸಾವು..

ಮೂಡಲದಿನ್ನಿ ಗ್ರಾಮದ ನಿವಾಸಿ ಕುಮಾರ್ ಗಂಭೀರ ಗಾಯ..

 

ರಾಯಚೂರು : ಬೈಕ್‌ಗೆ ಹಿಂಬದಿಯಿಂದ ಬುಲೇರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಮಸ್ಕಿ ಪಟ್ಟಣದ ಲಿಂಗಸುಗೂರು ರಸ್ತೆಯಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಲಿಂಗಸುಗೂರಿನಿಂದ ಮಸ್ಕಿಯ ಮೂಡಲದಿನ್ನಿ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಹಿಂಬದಿಯಿಂದ ವೇಗವಾಗಿ ಬಂದ ಬುಲೇರೊ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮೃತ ಮಹಿಳೆಯನ್ನು ಹನುಮಮ್ಮ (45) ಎಂದು ಗುರುತಿಸಲಾಗಿದೆ. ಗಂಭಿರವಾಗಿ ಗಾಯಗೊಂಡ ಬೈಕ್ ಚಾಲಕ ಕುಮಾರ್ (23) ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಹನುಮಮ್ಮ ರಸ್ತೆಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಬೈಕ್ ಚಾಲಕ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಆಸ್ಪತ್ರೆಗೆ ರವಾನಿಸಲಾಗಿದೆ. ಬುಲೇರೊ ವಾಹನದ ಚಾಲಕನ ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಘಟನೆ ಕುರಿತು ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST