LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೌಟುಂಬಿಕ ಕಲಹದ ಬೆನ್ನಲ್ಲೇ ತಾಯಿ, ಇಬ್ಬರು ಮಕ್ಕಳ ಸಾವು ; ಕೊಲೆ ಶಂಕೆ..

ರಾಯಚೂರಿನ ಜಲಾಲ್ ನಗರದಲ್ಲಿ ಘಟನೆ..

ರಾಯಚೂರು : ನಗರದ ಜಲಾಲನಗರದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ದುರ್ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಮೃತರನ್ನು ಜಲಾಲನಗರದ ಅರುಣ (40), ಅವರ ಪುತ್ರ ಶ್ಲೋಕ (10) ಹಾಗೂ ಪುತ್ರಿ ಖುಷಿ (4) ಎಂದು ಗುರುತಿಸಲಾಗಿದೆ. ಘಟನೆ ನಡೆದ ಬಳಿಕ ಅರುಣ ಅವರ ಪತಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಇದರಿಂದ ಪ್ರಕರಣ ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ.

ಮೂರು ಮಂದಿಯ ಸಾವಿನ ಕುರಿತು ಕೊಲೆ ಶಂಕೆಯೂ ವ್ಯಕ್ತವಾಗಿದ್ದು, ಸಾವಿಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಮಾರ್ಕೆಟ್ ಯಾರ್ಡ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಪತಿ ಪತ್ತೆಯಾದ ಬಳಿಕ ವಿಚಾರಣೆ ನಡೆಸಿ ಘಟನೆಯ ಹಿಂದಿನ ನಿಖರ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST