ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ವಿವಿಧ ಪೆಟ್ರೋಲ್ ಬಂಕ್‌ಗಳಲ್ಲಿ ಡೀಸೆಲ್ ಕೊರತೆಯಿಂದ ರೈತರು ತೀವ್ರ ಸಂಕಷ್ಟ ಅನುಭವಿಸಿದರು. ರಾತ್ರಿ 1 ಗಂಟೆಯವರೆಗೂ ಕ್ಯಾನ್ ಹಿಡಿದು ಕ್ಯೂನಲ್ಲಿ ನಿಂತರೂ ಡೀಸೆಲ್ ಸಿಗದೆ ರೈತರು ಅಸಮಾಧಾನ ವ್ಯಕ್ತಪಡಿಸಿದರು.
ಮಳೆಯ ಹಿನ್ನೆಲೆ ಹತ್ತಿ ಹಾಗೂ ಮೆಣಸಿನಕಾಯಿ ಬಿತ್ತನೆಗೆ ಹೊಲ ಸಿದ್ಧಪಡಿಸಿದ್ದ ರೈತರು, ಬೆಳಿಗ್ಗೆ 11 ಗಂಟೆಯಿಂದ ಕಾಯುತ್ತಿದ್ದೇವೆ ಎಂದು ಅಳಲು ತೋಡಿಕೊಂಡರು. ಟ್ರ್ಯಾಕ್ಟರ್‌ಗೆ 1000 ರೂ., ಕ್ಯಾನ್‌ಗೆ 500 ರೂ. ಮಿತಿಯಲ್ಲಿ ಮಾತ್ರ ಡೀಸೆಲ್ ನೀಡಲಾಗುತ್ತಿದೆ ಎಂದು ಆರೋಪಿಸಿದರು. ರೈತರ ಸಮಸ್ಯೆಗೆ ಸ್ಪಂದಿಸುವವರಿಲ್ಲ ಎಂದು ಆಕ್ರೋಶ ವ್ಯಕ್ತವಾಯಿತು.