LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಮಟ್ಟದ ಪತ್ರಕರ್ತರ  ಸಮ್ಮೇಳನ ಯಶಸ್ವಿಗೆ ಸಂಪೂರ್ಣ ಸಹಕಾರ 

ಜಿಲ್ಲಾ ಉಸ್ತುವಾರಿ ಸಚಿವ ಅಜಯ್ ಸಿಂಗ್ ಭರವಸೆ

 

 ರಾಯಚೂರಿನಲ್ಲಿ ನಡೆಯಲಿರುವ 41ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಯಶಸ್ವಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯ್ ಧರ್ಮಸಿಂಗ್ ತಿಳಿಸಿದರು ಬೆಂಗಳೂರಿನಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದಲ್ಲಿ ಭೇಟಿಯಾದ ರಾಯಚೂರು ಜಿಲ್ಲೆಯ ಪತಕರ್ತರ ಜೊತೆ ಸಮ್ಮೇಳನ ಪೂರ್ವಭಾವಿಯಾಗಿ ಮಾತುಕತೆ ನಡೆಸಿದರು.

ರಾಯಚೂರಿನಲ್ಲಿ ಸಮ್ಮೇಳನ ನಡೆಯುತ್ತಿರುವುದು ಬಹಳ ಖುಷಿಯ ವಿಚಾರ. ಸಮ್ಮೇಳನದ ಎಲ್ಲಾ ಸಿದ್ಧತೆಗಳನ್ನು ಶೀಘ್ರದಲ್ಲಿ ಆರಂಭಿಸುವ ಕುರಿತು ಸಭೆ ನಡೆಸಲಾಗುವುದು. ಸಮ್ಮೇಳನದ ಎಲ್ಲಾ ಕೆಲಸ ಕಾರ್ಯಗಳು ಅಚ್ಚುಕಟ್ಟಾಗಿ ನಿರ್ವಹಿಸೋಣ. ಎಲ್ಲರೂ ಸಹಕಾರದೊಂದಿಗೆ ಒಗ್ಗೂಡಿ  ಕೆಲಸ ಮಾಡಬೇಕಿದೆ ಎಂದು ತಿಳಿಸಿದರು. 

ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, ಕಳೆದ ಬಾರಿ ಬೀದರ್ ನಲ್ಲಿ ನಡೆದ 40ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ಯಶಸ್ವಿಯಾಗಿದ್ದು, ರಾಯಚೂರಿನಲ್ಲಿ ಕೂಡ ಅದ್ದೂರಿಯಾಗಿ ಸಮ್ಮೇಳನ ನಡೆಸಬೇಕಿದೆ. ಸಮ್ಮೇಳನಕ್ಕೆ ಈಗಿನಿಂದಲೇ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಆರ್ ಗುರುನಾಥ್, ರಾಜ್ಯ ಸಮಿತಿ ಸದಸ್ಯ ಬಸವರಾಜ ನಾಗಡದಿನ್ನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಯ್ಯ ಸ್ವಾಮಿಕುಕನೂರು, ಕಾರ್ಯಕಾರಿ ಸಮಿತಿ ಸದಸ್ಯರಾದ ವಿಶ್ವನಾಥ್ ಹೂಗಾರ್, ನೀಲಕಂಠ ಸ್ವಾಮಿ, ಪ್ರಸನ್ನ ಜೈನ್, ಲಕ್ಷ್ಮಣ್ ಕಪಗಲ್, ಪತ್ರಕರ್ತರಾದ ರಾಮಕೃಷ್ಣ ದಾಸರಿ, ಚನ್ನಬಸವ ಬಾಗಲವಾಡ, ಖಾನ್ ಸಾಬ್ ಮೊಮಿನ್, ಲಿಂಗಸುಗೂರು ತಾಲೂಕ ಅಧ್ಯಕ್ಷ ಶಿವರಾಜ್ ಕೆಂಭಾವಿ ಸೇರಿದಂತೆ ಇತರರು ಇದ್ದರು.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST