LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೊತಗಲ್ ಗ್ರಾಮದಲ್ಲಿ ಕೆಕೆಆರ್‌ಟಿಸಿ ಬಸ್–ಬೈಕ್ ಬೀಕರ ಅಪಘಾತ..

ಗದಾರ ಗ್ರಾಮದ ಸವಾರ ಸ್ಥಳದಲ್ಲೇ ಸಾವು.. ವೀಡಿಯೋ ಒಳಗೊಂಡಿದೆ..

 

ರಾಯಚೂರು : ಕೆಕೆಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ತಾಲೂಕಿನ ಪೋತ್ಗಲ್ ಗ್ರಾಮದ ಬಳಿ ನಡೆದಿದೆ. ಗದಾರ ಗ್ರಾಮದ ನರಸಿಂಹ (40) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ.

ನರಸಿಂಹ ಅವರು ಶಾಖವಾದಿಯಿಂದ ರಾಯಚೂರು ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಪೋತ್ಗಲ್ ಹಳ್ಳದ ಸಮೀಪ ಈ ಅಪಘಾತ ಸಂಭವಿಸಿದೆ. ಎದುರಿನಿಂದ ಬಂದ ಕೆಕೆಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ನರಸಿಂಹ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೆಕೆಆರ್‌ಟಿಸಿ ಬಸ್ ಅತೀವೇಗವಾಗಿ ಚಲಿಸುತ್ತಿದ್ದು, ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಘಟನೆ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ನಿಖರ ಕಾರಣ ಹಾಗೂ ಚಾಲಕನ ನಿರ್ಲಕ್ಷ್ಯದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸಂಬಂಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST