ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರ ಸಮಸ್ಯೆಯಾಗಿದ್ದು, ಸಾರ್ವಜನಿಕರು ಎರಡು ಹಗಲು ಹಾಗೂ ಎರಡು ರಾತ್ರಿ ಗ್ಯಾಸ್ ಏಜೆನ್ಸಿ ಮುಂದೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕಳೆದ 4 ದಿನಗಳಿಂದ ಜನ ಒಂದು ಚಾಪೆ, ದಿಂಬು, ಚಾದರ್ ಹಾಗೂ ಖಾಲಿ ಸಿಲಿಂಡರ್ ಹಿಡಿದು ಬಂದ ಗ್ರಾಮಸ್ಥರು ರಾತ್ರಿಯಿಡೀ ಏಜೆನ್ಸಿ ಅಂಗಡಿ ಎದುರು ಮಲಗಿ ಗ್ಯಾಸ್‌ಗಾಗಿ ನಿರೀಕ್ಷಿಸುತ್ತಿದ್ದಾರೆ. ಕಳೆದ ಹಲವು ದಿನಗಳಿಂದ ಗ್ಯಾಸ್ ಸಿಗದೆ ಜನರು ಸಂಕಷ್ಟ ಅನುಭವಿಸುತ್ತಿದ್ದು, ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.