LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ಶಾಸಕ ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನಕ್ಕೆ ಒತ್ತಾಯ

ಸಿಂಧನೂರಿನಲ್ಲಿ ಬೆಂಬಲಿಗರ ಬೃಹತ್ ಪ್ರತಿಭಟನೆ

ರಾಯಚೂರು :  ಜಿಲ್ಲೆಯ ಸಿಂಧನೂರು ನಗರದಲ್ಲಿ ಹಿರಿಯ ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಅವರ ನೂರಾರು ಬೆಂಬಲಿಗರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಶಾಸಕರ ಕಛೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಪ್ರಮುಖ ರಸ್ತೆಗಳ ಮೂಲಕ ಸಾಗಿ ಪ್ರಸಿದ್ಧ ಗಾಂಧಿ ವೃತ್ತವನ್ನು ತಲುಪಿತು. ಅಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಬಾದರ್ಲಿ ಅವರಿಗೆ ತಕ್ಷಣವೇ ಸಚಿವ ಸ್ಥಾನ ನೀಡಬೇಕೆಂದು ತೀವ್ರವಾಗಿ ಒತ್ತಾಯಿಸಿದರು.

ಪ್ರತಿಭಟನಾಕಾರರ ಪ್ರಮುಖ ಆಗ್ರಹ : 

ಹಂಪನಗೌಡ ಬಾದರ್ಲಿ ಅವರು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ರಾಜಕೀಯದಲ್ಲಿ ಸುದೀರ್ಘ ಅನುಭವ ಹೊಂದಿದ್ದಾರೆ. ಇಂತಹ ಹಿರಿಯ ನಾಯಕರಿಗೆ ನೂತನ ಸಚಿವ ಸಂಪುಟದ ಮೊದಲ ಪಟ್ಟಿಯಲ್ಲೇ ಸಚಿವ ಸ್ಥಾನ ನೀಡಬೇಕಾಗಿತ್ತು. ಆದರೆ ಅವರಿಗೆ ಈ ಬಾರಿ ಅನ್ಯಾಯವಾಗಿದೆ.


ಕ್ಷೇತ್ರದ ಅಭಿವೃದ್ಧಿ ಮತ್ತು ಜಿಲ್ಲೆಯ ರಾಜಕೀಯ ಸಮತೋಲನಕ್ಕಾಗಿ ಬಾದರ್ಲಿ ಅವರ ಅನುಭವದ ಅಗತ್ಯವಿದೆ ಎಂದು ಪ್ರತಿಪಾದಿಸಿದ ಬೆಂಬಲಿಗರು, ಕಾಂಗ್ರೆಸ್ ಹೈಕಮಾಂಡ್ ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಬಾದರ್ಲಿ ಅವರಿಗೆ ಸಚಿವ ಸ್ಥಾನ ನೀಡುವಂತೆ ರಾಜ್ಯ ನಾಯಕರಿಗೆ ಹೈಕಮಾಂಡ್ ಸೂಕ್ತ ನಿರ್ದೇಶನ ನೀಡಬೇಕು ಎಂದು ಪ್ರತಿಭಟನೆಯ ಮೂಲಕ ಎಚ್ಚರಿಕೆ ನೀಡಿದರು. ಒಂದು ವೇಳೆ ಹಿರಿಯ ಶಾಸಕರನ್ನು ಕಡೆಗಣಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಬೆಂಬಲಿಗರು ಎಚ್ಚರಿಸಿದ್ದಾರೆ.

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST