ರಾಯಚೂರು : ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರೆದಿದ್ದು, ನಗರದ ಯರಮರಸ್‌ನಲ್ಲಿ 4 ವರ್ಷದ ಅರ್ಫತ್ ಅಲಿ ಎಂಬ ಬಾಲಕನ ಮೇಲೆ ನಾಯಿಯೊಂದು ಭೀಕರವಾಗಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದೆ.
ಮನೆಯ ಅಂಗಳದಲ್ಲಿ ಮಗು ಆಟವಾಡುತ್ತಿದ್ದಾಗ ಏಕಾಏಕಿ ಈ ಘಟನೆ ನಡೆದಿದ್ದು, ಪೋಷಕರು ತಕ್ಷಣ ಧಾವಿಸಿ ನಾಯಿಯಿಂದ ಮಗುವನ್ನು ರಕ್ಷಿಸಿದ್ದಾರೆ. ಸದ್ಯ ಗಾಯಾಳು ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಡಾವಣೆಯಲ್ಲಿ ಬೀದಿ ನಾಯಿಗಳ ಕಾಟ ಮಿತಿಮೀರಿದ್ದು, ಪೋಷಕರು ತೀವ್ರ ಆತಂಕದಲ್ಲಿದ್ದಾರೆ. ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡಲೇ ಗಮನಹರಿಸಿ, ನಾಯಿಗಳನ್ನು ಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಸಾರ್ವಜನಿಕರು ಆಕ್ರೋಶದೊಂದಿಗೆ ಆಗ್ರಹಿಸಿದ್ದಾರೆ.