LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಯಚೂರು ಭೇಟಿ, ಮಹತ್ವದ ಸಭೆ..

ಮಹತ್ವಾಕಾಂಕ್ಷೆಯ ಜಿಲ್ಲೆಗಳ ಪರಿಶೀಲನಾ ಸಭೆ

ರಾಯಚೂರು/ಯಾದಗಿರಿ : ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಜಿಲ್ಲೆಯಲ್ಲಿ ವಿವಿಧ ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲ್ಲೂಕಿನ ಬದ್ದೇಪಲ್ಲಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ರೈತ ತರಬೇತಿ ಕೇಂದ್ರ’ ಮತ್ತು ಸಿಎಫ್‌ಸಿ (CFC) ಕೇಂದ್ರವನ್ನು ಸಚಿವರು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಈ ಕೇಂದ್ರವು ಸ್ಥಳೀಯ ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ತರಬೇತಿ ನೀಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ.

ಇದಾದ ಬಳಿಕ, ಸಚಿವರು ಶಕ್ತಿನಗರದ ಆರ್.ಟಿ.ಪಿ.ಎಸ್ (RTPS) ಅತಿಥಿ ಗೃಹಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಪ್ರಗತಿಗೆ ಸಂಬಂಧಿಸಿದಂತೆ ‘ಮಹತ್ವಾಕಾಂಕ್ಷೆಯ ಜಿಲ್ಲೆಗಳ ಪರಿಶೀಲನಾ ಸಭೆ’ಯನ್ನು ನಡೆಸಲಿದ್ದಾರೆ. ಈ ಉನ್ನತ ಮಟ್ಟದ ಸಭೆಯಲ್ಲಿ ಉಭಯ ಜಿಲ್ಲೆಗಳ ಮೂಲಸೌಕರ್ಯ, ಆರೋಗ್ಯ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲಾಗುವುದು.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಅನುಷ್ಠಾನವನ್ನು ಚುರುಕುಗೊಳಿಸಲು ಮತ್ತು ಯಾದಗಿರಿ-ರಾಯಚೂರು ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ವೇಗ ನೀಡಲು ಈ ಭೇಟಿ ಅತ್ಯಂತ ಪ್ರಮುಖವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

 

Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST