
K2 ಪೊಲಿಟಿಕಲ್ ನ್ಯೂಸ್: ರಾಜ್ಯ ಬಿಜೆಪಿ ಪಕ್ಷದಲ್ಲಿ ಶಿಸ್ತು ಬದ್ಧತೆ, ನಾಯಕತ್ವ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿ ಹಾಗಾಗಿ ರಾಜ್ಯಕ್ಕೆ ಆಗಾಗ ಮೋದಿ ಅಮಿತ್ ಶಾ ಆಗಮಿಸುತ್ತಿದ್ದಾರೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯ ಮಾಡಿದ್ದಾರೆ.
ಈಗಾಗಲೇ ಅಮಿತ್ ಶಾ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಇಲ್ಲ ಎಂದು ಒಪ್ಪಿಕೊಂಡಿದ್ದಾರೆ. ಬಿಜೆಪಿಯಲ್ಲಿ ನಾಯಕತ್ವ ಇಲ್ಲ, ಆದ್ದರಿಂದಲೇ ಅಮಿತ್ ಶಾ, ನರೇಂದ್ರ ಮೋದಿ ಆಗಾಗ ರಾಜ್ಯಕ್ಕೆ ಆಗಮಿಸುತ್ತಾರೆ ಎಂದು ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ಸರ್ಕಾರ ಸಂಪೂರ್ಣ ವೈಫಲ್ಯ ಕಂಡಿದೆ. ಜ.11ರಿಂದ ಕಾಂಗ್ರೆಸ್ ನಾಯಕರ ರಾಜ್ಯ ಪ್ರವಾಸ ಆರಂಭವಾಗಲಿದ್ದು, ಬಿಜೆಪಿ ಸರ್ಕಾರದ ಅನ್ಯಾಯಗಳನ್ನು ಜನರಿಗೆ ತಿಳಿಸಲಾಗುವುದು ಎಂದಿದ್ದಾರೆ.
![]() |
![]() |
![]() |
![]() |
![]() |
[ays_poll id=3]