This is the title of the web page
This is the title of the web page
Politics News

ಏಮ್ಸ್​ ಒತ್ತಡ ಹೇರಲು ಕೇಂದ್ರ ಸಚಿವರಿಗೆ NSB ಮನವಿ


K2 ಪೊಲಿಟಿಕಲ್ ನ್ಯೂಸ್ : ರಾಯಚೂರಿಗೆ ಬಹು ಅವಶ್ಯವಿರುವ ಏಮ್ಸ್ ಮಂಜೂರಾತಿ ಪ್ರಕ್ರಿಯೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವಂತೆ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಸಚಿವ ಭಗವಂತ ಖೂಬಾಗೆ ಸಚಿವ ಎನ್ ಎಸ್‌ ಬೋಸರಾಜು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಮನ್ಸೂಖ್ ಮಂಡವಿಯಾ ಅವರಿಗೆ ಪತ್ರವನ್ನು ಬರೆದಿದ್ದಾರೆ. ಈ ಭಾಗದ ಜನರ ಚಿಕಿತ್ಸೆಗಾಗಿ ಏಮ್ಸ್ ಅವಶ್ಯಕತೆ ಹೆಚ್ಚಾಗಿದೆ. ಹೀಗಾಗಿ ಕೇಂದ್ರ ಸರ್ಕಾರದ ಮನವೊಲಿಸಬೇಕು ಎಂದು ಸಚಿವರು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರಗಳ ಸ್ಥಾಪನೆ : ಹಿಂದುಳಿದ ಜಿಲ್ಲೆಗಳಾಗಿರುವ ಕಲ್ಯಾಣ ಕರ್ನಾಟಕದ ಯಾದಗಿರಿ ಮತ್ತು ರಾಯಚೂರು ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸಲ್ಲಿಸಿರುವ ಪ್ರಸ್ತಾಪಗಳಿಗೆ ಶೀಘ್ರ ಒಪ್ಪಿಗೆ ನೀಡುವಂತೆ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ 22.25 ಕೋಟಿ ರೂಪಾಯಿಗಳ ಅನುದಾನದಲ್ಲಿ ಕೆಟಗರಿ-3, ಟೈಪ್-ಬಿ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲು ಅಗತ್ಯವಿರುವ ಶೇಕಡಾ 50 ರಷ್ಟು ಅನುದಾನ ರಾಜ್ಯ ಸರಕಾರ ಭರಿಸುವ ಒಪ್ಪಿಗೆಯನ್ನು ನೀಡಿದೆ.

ಕೇಂದ್ರ ಸ್ಥಾಪನೆಗೆ ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಂ ಎತ್ತಿದ್ದಂತಹ ಪ್ರಶ್ನೆಗಳಿಗೆ ಉತ್ತರವನ್ನು ನೀಡಲಾಗಿದೆ. ಕೇಂದ್ರ ಸ್ಥಾಪನೆಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ರಾಜ್ಯ ಸರ್ಕಾರ ನೀಡಲು ಸಿದ್ಧವಿದೆ. ಹಿಂದುಳಿದ ಜಿಲ್ಲೆಯಾಗಳಾಗಿರುವ ಯಾದಗಿರಿ ಮತ್ತು ರಾಯಚೂರಿನ ವಿದ್ಯಾರ್ಥಿಗಳು ಮತ್ತು ವಿಜ್ಞಾನ ಆಸಕ್ತರ ಅನುಕೂಲಕ್ಕಾಗಿ ಇದು ಬಹಳ ಅಗತ್ಯವಾಗಿದೆ. ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸುವ ಹಾಗೂ ಅಗತ್ಯ ಅನುದಾನ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದು ಎನ್.ಎಸ್ ಬೋಸರಾಜು ಹೇಳಿದ್ದಾರೆ.


[ays_poll id=3]