ಮಾನ್ವಿ : ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿ ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳ ಕಾರ್ಯ ಶ್ಲಾಘನೀಯ ಎಂದು ಹರನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಲಿಂಗಣ್ಣ ಹೇಳಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತಿ ಸದಸ್ಯ ಪ್ರಕಾಶ ಅವರು ನೇರವೇರಿಸಿದರು. ಮಾಜಿ ಗ್ರಾಮ ಪಂಚಾಯತಿ ಸದಸ್ಯ ರಾಜಪ್ಪಗೌಡ ಅವರು ಎನ್ ಎಸ್ ಎಸ್ ಧ್ವಜಾರೋಹಣ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಮಠ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್ ಎಸ್ ಪಾಟೀಲ ಅವರು ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ನರಸಣ್ಣ ಸುಂಕೇಶ್ವರ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
![]() |
![]() |
![]() |
![]() |
![]() |
[ays_poll id=3]