
K2 ನ್ಯೂಸ್ ಡೆಸ್ಕ್ : ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡುವಂತೆ ಒತ್ತಾಯಿಸಿ ಹಲವು ತಿಂಗಳುಗಳಿಂದ ಹೋರಾಟಗಳು ನಡೆಯುತ್ತಿದೆ. ಆದರೆ ಹೋರಾಟಕ್ಕೆ ಮತ್ತು ಹೊಸ ಪಿಂಚಣಿದಾರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ತರುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ನೀಡಿದ್ದಾರೆ.
ಸರ್ಕಾರಿ ನೌಕರರಿಗೆ ಸದ್ಯ ಜಾರಿಯಲ್ಲಿರುವ ನೂತನ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವ ಪ್ರಸ್ತಾವ ಇಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಅಧಿವೇಶನದಲ್ಲಿ ಪ್ರಶ್ನೆಗೆ ಉತ್ತರಿಸಿರುವ ಅವರು, ದೇಶದ ರಾಜ್ಯಗಳು ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೇ ಪಿಂಚಣಿ ಯೋಜನೆ ಜಾರಿಗೆ ತಂದಿರುವುದು ಸರ್ಕಾರದ ಗಮನಕ್ಕೆ ಬಂದಿಲ್ಲ ಈ ಮೂಲಕ ಸರ್ಕಾರದ ಮುಂದೆ ಹಳೆಯ ಯೋಜನೆಯನ್ನು ಜಾರಿಗೆ ತರುವ ಚಿಂತನೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
![]() |
![]() |
![]() |
![]() |
![]() |
[ays_poll id=3]