
K2 ನ್ಯೂಸ್ ಡೆಸ್ಕ್: ಸರ್ಕಾರಿ ಜಮೀನು ಒತ್ತುವರಿಯಾಗಿದ್ದರೇ ಅದನ್ನು ತೆರವುಗೊಳಿಸುವ ಮತ್ತು ಒತ್ತುವರಿದಾರಿಗೆ ನೋಟಿಸ್ ನೀಡುವ ಅಧಿಕಾರ ಜಿಲ್ಲಾಧಿಕಾರಿ ಮಾತ್ರ ಹೊಂದಿರುತ್ತಾರೆ ಎಂದು ಸ್ಪಷ್ಟಪಡಿಸಿ ಹೈಕೋರ್ಟ್ ಆದೇಶಿಸಿದೆ.
ಖಾಸಗಿ ವ್ಯಕ್ತಿಗಳಿಂದ ಸರ್ಕಾರದ ಜಮೀನು ಒತ್ತುವರಿಯಾಗಿದ್ದರೆ ಅದಕ್ಕೆ ನೋಟಿಸ್ ನೀಡುವ ಅಧಿಕಾರ ಜಿಲ್ಲಾಧಿಕಾರಿಗೆ ಮಾತ್ರ ಇದೆ ಎಂದು ಹೈಕೋರ್ಟ್ ತಿಳಿಸಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ಕೋರ್ಟ್, ಸರ್ಕಾರಿ ಜಮೀನು ಒತ್ತುವರಿ ತೆರವು ಸಂಬಂಧ ನೋಟಿಸ್ ನೀಡಲು ತಹಶೀಲ್ದಾರ್‌ಗೆ ಅಧಿಕಾರ ಇಲ್ಲ. ಜಿಲ್ಲಾಧಿಕಾರಿಯೇ ನೋಟಿಸ್ ನೀಡಿ, ಒತ್ತುವರಿ ತೆರವುಗೊಳಿಸಬೇಕು. ಒತ್ತುವರಿ ಸಾಬೀತಾದರೆ ಅಥವಾ ಕೆಲಸಕ್ಕೆ ಅಡ್ಡಿ ಮಾಡಿದರೆ ಅದರ ವಿರುದ್ಧ ಡಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್ ಹೇಳಿದೆ.
![]() |
![]() |
![]() |
![]() |
![]() |
[ays_poll id=3]