
K2 ನ್ಯೂಸ್ ಡೆಸ್ಕ್: ಸಂಗೊಳ್ಳಿ ರಾಯಣ್ಣನ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಪ್ರತಿ ಸರ್ಕಾರಿ ಕಾಲೇಜಿನಲ್ಲಿ ಸ್ಥಾಪಿಸಬೇಕೆಂದು ಆದೇಶ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನ (ರಿ) ವತಿಯಿಂದ ದೇವರಾಜ ಅರಸು ವೃತ್ತದ (ಖೋಡೆ ಸರ್ಕಲ್) ಬಳಿ ಆಯೋಜಿಸಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 192ನೇ ಸ್ಮರಣೋತ್ಸವ ಅಂಗವಾಗಿ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿ ಮಾತನಾಡಿದರು.
ನಮ್ಮ ಮಕ್ಕಳಿಗೆ ಯಾರು ನಿಜವಾಗಿಯೂ ತಮ್ಮ ಪ್ರಾಣವನ್ನು ತ್ಯಾಗ ಮಾಡಿ ಸ್ವಾತಂತ್ರ್ಯಕ್ಕೆ ಹೋರಾಡಿದರು ಎಂದು ತಿಳಿಯಬೇಕು. ನಮ್ಮ ಮಕ್ಕಳಿಗೆ ಪ್ರೇರಣೆ ನೀಡುವ ಶಕ್ತಿಗಳನ್ನು ಗುರುತಿಸುವ ಕೆಲಸವಾಗಬೇಕು. ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರಿಡುವ ಬಗ್ಗೆ ಆ ಭಾಗದ ನಾಯಕರನ್ನು ವಿಶ್ವಾಸಕ್ಕೆ ಪಡೆದು ತೀರ್ಮಾನ ಮಾಡಲಾಗುವುದು. ಸಂಗೊಳ್ಳಿ ರಾಯಣ್ಣನ ಸ್ಫೂರ್ತಿ ಎಲ್ಲಿಯವರೆಗೆ ಇರುತ್ತದೋ ಅಲ್ಲಿಯವರೆಗೂ ಭಾರತ ಸುರಕ್ಷಿತವಾಗಿ ಇರಲಿದೆ. ಸಂಗೊಳ್ಳಿ ರಾಯಣ್ಣ ಮಾಡಿದ ಕಾರ್ಯಗಳಲ್ಲಿ ಒಂದೆರಡನ್ನಾದರೂ ನಾವು ಮಾಡಿದರೆ ದೇಶಕ್ಕೆ ಒಳಿತಾಗಲಿದೆ ಎಂದರು.
ನೀವು ಒಬ್ಬ ಸಂಗೊಳ್ಳಿ ರಾಯಣ್ಣನ ನ್ನು ನೇಣಿಗೆ ಹಾಕಿದರೆ ಪ್ರತಿ ಮನೆಯಲ್ಲಿ ಒಬ್ಬ ಸಂಗೊಳ್ಳಿ ರಾಯಣ್ಣ ಹುಟ್ಟುತ್ತಾನೆ ಎಂದಿದ್ದರು. ಸ್ವತಂತ್ರದ ಮೊದಲನೇ ಸ್ವಾತಂತ್ರ್ಯ ಹೋರಾಟಕ್ಕೂ 40 ವರ್ಷ ಮುನ್ನವೇ ದೇಶದ ಮೊದಲ ಸ್ವಾತಂತ್ರ್ಯ ಹೋರಾಟ ಮಾಡಿದ್ದು ಕಿತ್ತೂರು ರಾಣಿ ಚೆನ್ನಮ್ಮ. ಅವರೆಲ್ಲರೂ ಹೋರಾಟ ಮಾಡಿರದಿದ್ದರೆ, ಇಷ್ಟು ಬೇಗ ಸ್ವಾತಂತ್ರ್ಯ ಲಭಿಸುತ್ತಿರಲಿಲ್ಲ. ಅವರ ಸಾಹಸದ ಕಥೆ ಮಕ್ಕಳಿಗೆ ಹೇಳುವುದು ಅಗತ್ಯ. ಸ್ವತಂತ್ರ ಬಂದ ನಂತರ ಒಗ್ಗಟ್ಟಿನಿಂದ, ಮುಂದುವರೆದರೆ ಮಾತ್ರ ಈ ದೇಶಕ್ಕೆ ಭವಿಷ್ಯವಿದೆ ಎಂದು ಅರ್ಥ ಮಾಡಿಕೊಳ್ಳಬೇಕು. ಹಾಗಾಗಿ ಈ ಒಂದು ಸ್ವಾತಂತ್ರಕ್ಕಾಗಿ ತ್ಯಾಗ ಮಾಡಿದ ಸಂಗೊಳ್ಳಿ ರಾಯಣ್ಣ ಮತ್ತು ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗಳನ್ನು ಪ್ರತಿ ಕಾಲೇಜಿನಲ್ಲಿ ಸ್ಥಾಪನೆ ಮಾಡಲು ಆದೇಶಿಸಿದರು.
![]() |
![]() |
![]() |
![]() |
![]() |
[ays_poll id=3]