
K2 ಪೊಲಿಟಿಕಲ್ ನ್ಯೂಸ್ : ಬದುಕನ್ನು ಕಟ್ಟಿಕೊಡುವಂತಹ ಹಲವಾರು ಯೋಜನೆಗಳನ್ನು ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ್ದು, ತುಮಕೂರು ಜಿಲ್ಲೆಯ 24 ಲಕ್ಷ ಜನರಿಗೆ ಉಭಯ ಸರ್ಕಾರಗಳ ವಿವಿಧ ಯೋಜನೆಗಳ ಸವಲತ್ತುಗಳನ್ನು ಒದಗಿಸಲಾಗಿದೆ. ಯೋಜನೆಗಳನ್ನು ಘೋಷಿಸುವುದಲ್ಲದೆ ಪೂರ್ಣ ಪ್ರಮಾಣದಲ್ಲಿ ಯೋಜನೆಗಳನ್ನು ಕಾರ್ಯಗತಗೊಳಿಸುವಲ್ಲಿ ನಮ್ಮ ಸರ್ಕಾರ ಮುಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡುತ್ತಾ ಕನ್ನಡನಾಡಿನಲ್ಲಿ ಬಡತನವನ್ನು ಸಂಪೂರ್ಣವಾಗಿ ಅಳಿಸಿ ಸಮೃದ್ಧಿ ಕರ್ನಾಟಕ ಸ್ಥಾಪಿಸುವ ಸಂಕಲ್ಪ ಕೈಗೊಳ್ಳುತ್ತಿರುವುದಾಗಿ ಘೋಷಿಸಿದರು. ಪ್ರಧಾನ ಮಂತ್ರಿ ನರೇಂದ್ರಮೋದಿಯವರ ಗರೀಬ್ ಕಲ್ಯಾಣ್, ಆತ್ಮ ನಿರ್ಭರ್ ಭಾರತ್, ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಯೋಜನೆಗಳ ಅನುದಾನ ನೇರವಾಗಿ ಫಲಾನುಭವಿಗಳ ಖಾತೆಗೆ ಡಿಬಿಟಿ ತಂತ್ರಜ್ಞಾನದ ಮೂಲಕ ಜಮೆಯಾಗುತ್ತಿದೆ. ಸುಮಾರು 53.43 ಲಕ್ಷ ಕರ್ನಾಟಕ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಕಳೆದ ನಾಲ್ಕು ವರ್ಷದಲ್ಲಿ 16 ಸಾವಿರ ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಕೊಟ್ಟಿದ್ದು, 4483 ಕೋಟಿ ರಾಜ್ಯ ಸರ್ಕಾರ ಕೊಟ್ಟಿದೆ ಎಂದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಕರ್ನಾಟಕಕ್ಕೆ 17ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದೆ. ಸ್ವಚ್ ಭಾರತ್ ಯೋಜನೆಯಡಿ ಶೌಚಾಲಯವನ್ನು ನಿರ್ಮಿಸಲಾಗಿದೆ, ಜಲ ಜೀವನ್ ಮಿಷನ್ ಯೋಜನೆಯಡಿ ಜನರ ಮನೆಯ ಬಾಗಿಲಿಗೆ ಕುಡಿಯುವ ನೀರನ್ನು ನೀಡಿದ್ದೇವೆ, ದೀನ್ ದಯಾಳ್ ಯೋಜನೆಯ ಬೆಳಕು ಕಾರ್ಯಕ್ರಮದಡಿ ಕಳೆದ ಒಂದು ವರ್ಷದಲ್ಲಿ 2.28 ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದರು.
ರೈತರ ಮಕ್ಕಳು ಸಹ ಎಲ್ಲಾ ಕ್ಷೇತ್ರಗಳಲ್ಲೂ ಬೆಳೆಯಬೇಕು ಎಂಬ ನಿಟ್ಟಿನಲ್ಲಿ ರೈತ ವಿದ್ಯಾ ನಿಧಿ ಯೋಜನೆಯನ್ನು ಜಾರಿಗೆ ತಂದಿದ್ದು, ರಾಜ್ಯದ 12 ಲಕ್ಷ ರೈತರ ಮಕ್ಕಳು ಹಾಗೂ ತುಮಕೂರು ಜಿಲ್ಲೆಯ 18 ಸಾವಿರ ರೈತ ಮಕ್ಕಳು ರೈತ ವಿದ್ಯಾನಿಧಿ ಯೋಜನೆಯ ಸೌಲಭ್ಯ ಪಡೆದುಕೊಂಡಿದ್ದಾರೆ ಎಂದರು. ಜಮೀನು ಇಲ್ಲದ ಕಡು ಬಡ ಹೆಣ್ಣು ಮಕ್ಕಳ ಖಾತೆಗೆ ಪ್ರತಿ ತಿಂಗಳು ಒಂದು ಸಾವಿರ, ಯುವಶಕ್ತಿಯನ್ನು ಮುಖ್ಯವಾಹಿನಿಗೆ ತರಲು ಉದ್ಯೋಗ ಯೋಜನೆ, ಹಳ್ಳಿಗಾಡಿನ ಮಕ್ಕಳಿಗಾಗಿ 2ಸಾವಿರ ಶಾಲಾ ಬಸ್ಸ್ ಗಳ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದರು.
![]() |
![]() |
![]() |
![]() |
![]() |
[ays_poll id=3]