
K2 ಪೊಲಿಟಿಕಲ್ ನ್ಯೂಸ್ : ರಾಜ್ಯ ರಾಜಕೀಯದಲ್ಲಿ ಇದೀಗ ಸೋಲು ಗೆಲುವುಗಳ ಲೆಕ್ಕಾಚಾರ ಆರಂಭವಾಗಿದೆ. ರಾಜಕೀಯ ಮುಖಂಡರು ತಮ್ಮ ಪ್ರಾಬಲ್ಯ ಇರುವಂತಹ ಕ್ಷೇತ್ರಗಳಲ್ಲಿ ತಮ್ಮದೇ ಗೆಲುವು ಖಚಿತ ಎಂಬ ನಿಟ್ಟಿನಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮೈಸೂರು ಚಾಮರಾಜನಗರ ಕ್ಷೇತ್ರಗಳಲ್ಲಿ 15 ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಮೈಸೂರಿನ 11, ಚಾಮರಾಜನಗರದ 4 ಕ್ಷೇತ್ರ ಸೇರಿ ಎರಡೂ ಜಿಲ್ಲೆಗಳ ಎಲ್ಲಾ ಸ್ಥಾನಗಳನ್ನು ನಾವೇ ಗೆಲ್ಲುತ್ತೇವೆಂದು ಸಿದ್ದರಾಮಯ್ಯ ತಿಳಿಸಿದ್ದಾರೆ. 2018ರ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಇರಲಿಲ್ಲ. ಆದರೂ ವಾಮಮಾರ್ಗದ ಮುಖೇನ ಅಧಿಕಾರಕ್ಕೆ ಬಂದರು. ಇಂಥವರಿಗೆ ಜನಪರ ಯೋಜನೆ ಜಾರಿಗೆ ತರಲು ಸಾಧ್ಯವಾಗಲ್ಲ. ಇನ್ನು 1.2 ವರ್ಷ ಸಿಎಂ ಆಗಿದ್ದ ಹೆಚ್.ಡಿ.ಕುಮಾರಸ್ವಾಮಿ, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾದರು ಎಂದಿದ್ದಾರೆ.
![]() |
![]() |
![]() |
![]() |
![]() |
[ays_poll id=3]