This is the title of the web page
This is the title of the web page
Local NewsVideo News

MSP ಜಾರಿಗೆ ಒತ್ತಾಯಿಸಿ ಪಂಜಿನ ಮೆರವಣಿಗೆ..


K2kannadanews.in

implementation of MSP ಸಿಂಧನೂರು : ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿಪಡಿಸುವ ಕಾನೂನು ಜಾರಿಗೊಳಿಸುವುದೂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿ ಹೋರಾಟ ಸಮಿತಿ ಸಿಂಧನೂರಿನಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಬಸವ ವೃತ್ತದಿಂದ ಮಹಾತ್ಮಗಾಂಧಿ ವೃತ್ತದವರೆಗೆ ಪಂಚನ ಮೆರವಣಿಗೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಲಾಯಿತು. ಸರ್ಕಾರ ತಮ್ಮ ಫಸಲಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಲಖಿಂಪುರ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ನಾಯಕನ ವಾಹನ ಹರಿದು ಮೃತಪಟ್ಟ ರೈತರ ಕುಟುಂಬಕ್ಕೆ ಪರಿಹಾರ ಕೊಡಬೇಕು. ರೈತರ ವಿರುದ್ಧ ದಾಖಲು ಮಾಡಿರುವ ಪ್ರಕರಣಗಳನ್ನು ವಾಪಸ್ ಪಡೆಯಬೇಕು. ರೈತ ಹೋರಾಟಗಳಲ್ಲಿ ಮಡಿದವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. 2013ರ ಭೂ ಸ್ವಾಧೀನ ಕಾಯ್ದೆಯನ್ನು ಮರು ಸ್ಥಾಪಿಸಿ ಸೂಕ್ತ ಪರಿಹಾರ ನೀಡಬೇಕು. ವಿಶ್ವ ವ್ಯಾಪಾರ ಸಂಸ್ಥೆಯಿಂದಲೇ ಭಾರತ ನಿರ್ಗಮಿಸಬೇಕು ಎಂದು ಒತ್ತಾಯಿಸಿದರು.


[ays_poll id=3]