ಕಾಂಗ್ರೆಸ್ ಪ್ರಣಾಳಿಕ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪರಮೇಶ್ವರ್ ರಾಜೀನಾಮೆ
![]() |
![]() |
![]() |
![]() |
![]() |
K2 ಪೊಲಿಟಿಕಲ್ ನ್ಯೂಸ್ : ಚುನಾವಣಾ ವರ್ಷ ಆಗಿರುವ ಹಿನ್ನೆಲೆಯಲ್ಲಿ ಪಕ್ಷಗಳು ತಮ್ಮ ಪ್ರಣಾಳಿಕೆಗಳನ್ನ ಬಿಡುಗಡೆ ಮಾಡುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿವೆ. ಇದೇ ಪ್ರಣಾಳಿಕೆ ವಿಚಾರ ಈಗ ಕಾಂಗ್ರೆಸ್ ನಲ್ಲಿ ಭುಗಿಲೆದ್ದಿದ್ದು, ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬ ಕಾರಣ ನೀಡಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪರಮೇಶ್ವರ್ ರಾಜೀನಾಮೆ ನೀಡಿದ್ದಾರೆ.
ರಾಜ್ಯ ನಾಯಕರು ಮುಂದಿನ ಚುನಾವಣೆಗೆ ಸರಣಿ ಭರವಸೆಗಳನ್ನು ಘೋಷಣೆ ಮಾಡುತ್ತಿರುವುದರಿಂದ ಅಸಮಾಧಾನಗೊಂಡಿದ್ದ ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು 10 ದಿನದ ಹಿಂದೆಯೇ ಸಮಿತಿಗೆ ರಾಜೀನಾಮೆ ನೀಡಿದ್ದರು ಎಂಬ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ. ಅಸಮಾಧಾನಗೊಂಡಿದ್ದ ಪರಮೇಶ್ವರ್ ಅವರನ್ನು ಸಮಾಧಾನಪಡಿಸಲು ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರ ನಿವಾಸಕ್ಕೆ ತೆರಳಿ ಸುದೀರ್ಘ ಮಾತುಕತೆ ನಡೆಸಿದ್ದರು. ಇಷ್ಟಾಗಿಯೂ ಬೇಸರ ಸಂಪೂರ್ಣವಾಗಿ ಮಾಯವಾದಂತಿಲ್ಲ. ಹೀಗಾಗಿಯೇ ಶುಕ್ರವಾರ ಕೋಲಾರದ ಕುರುಡುಮಲೆಯಿಂದ ಚಾಲನೆ ಪಡೆಯಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಯಾತ್ರೆಯಲ್ಲಿ ಪರಮೇಶ್ವರ್ ಭಾಗಿಯಾಗುವರೇ ಎಂಬುದು ಕಡೆ ಕ್ಷಣದವರೆಗೂ ಖಾತರಿಯಾಗಿಲ್ಲ.
![]() |
![]() |
![]() |
![]() |
![]() |