This is the title of the web page
This is the title of the web page
State News

ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗಿ : ಮೋದಿ ಭಾಗಿ


K2 ನ್ಯೂಸ್ ಡೆಸ್ಕ್: ಪ್ರಧಾನಿ ಮೋದಿಯವರು ಜನವರಿ 12 ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದರು.

ಜನವರಿ 19 ರಂದು ಪ್ರಧಾನಿ ಮೋದಿಯವರು ನಾರಾಯಣಪುರದಲ್ಲಿ ಆಗಮಿಸಲಿದ್ದು,ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ (ಎನ್ ಎಲ್ ಬಿ ಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗುಲ್ಬರ್ಗಾದ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ತಿಳಿಸಿದರು.


[ays_poll id=3]