
K2 ನ್ಯೂಸ್ ಡೆಸ್ಕ್ : ಪ್ರಜಾಪ್ರಭುತ್ವಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯ ಎನ್ನುವುದು ರಕ್ತ ಪಂಪ್ ಮಾಡುವ ಹೃದಯ ಇದ್ದಂತೆ. ಈ ಹೃದಯವನ್ನು ಕೊಟ್ಟಿರುವುದು ನಮ್ಮ ಸಂವಿಧಾನ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ಪತ್ರಕರ್ತರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕೊಟ್ಟಿರುವುದು ನಮ್ಮ ಸಂವಿಧಾನ. ಹೀಗಾಗಿ ಸಂವಿಧಾನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾವು ಕಾಪಾಡಿಕೊಳ್ಳಬೇಕು. ಸುಳ್ಳು ಮತ್ತು ತಿರುಚಿದ ಸುದ್ದಿಗಳ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಪಚಾರ ಎಸಗಬಾರದು ಎಂದರು. 24×4 ಸುದ್ದಿ ವಾಹಿನಿಗಳು ಬಂದ ನಂತರ ಸಿನಿಮಾ, ರಾಜಕಾರಣ, ಕ್ರೈಂ ಸುದ್ದಿಗಳು ಮಾಧ್ಯಮಲೋಕವನ್ನು ಆವರಿಸಿಕೊಂಡು ಜನರ ಸಮಸ್ಯೆಗಳು ಹಿನ್ನೆಲೆಗೆ ಸರಿದಿವೆ.
ಟಿ.ಆರ್.ಪಿ ದಾಹಕ್ಕೆ ಬಿದ್ದು ಸತ್ಯಕ್ಕೆ ಅಪಚಾರ ಆಗಬಾರದು. ಸತ್ಯವನ್ನು ತೋರಿಸದಿದ್ದರೂ ತೊಂದರೆ ಇಲ್ಲ. ಆದರೆ ಸುಳ್ಳನ್ನು ಮಾತ್ರ ತೋರಿಸಬೇಡಿ. ಸುಳ್ಳು ಮತ್ತು ತೇಜೋವಧೆಯನ್ನು ಸಹಿಸಿಕೊಳ್ಳುವ ಶಕ್ತಿ ಎಲ್ಲರಿಗೂ ಇರುವುದಿಲ್ಲ. ಆದ್ದರಿಂದ ಈ ವಿಚಾರದಲ್ಲಿ ಪತ್ರಕರ್ತರು ಮತ್ತು ಮಾಧ್ಯಮಗಳು ಬಹಳ ಜವಾಬ್ದಾರಿಯಿಂದ, ಮಾನವೀಯತೆಯಿಂದ ವರ್ತಿಸಬೇಕು ಎಂದರು. ಪತ್ರಕರ್ತ ಸಮೂಹದ ಸಮಸ್ಯೆಗಳಿಗೆ ಹಂತ ಹಂತವಾಗಿ ಸ್ಪಂದಿಸಿ ಸರ್ಕಾರದ ನೆರವು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
![]() |
![]() |
![]() |
![]() |
![]() |
[ays_poll id=3]