
ರಾಯಚೂರು : ರಾಯಚೂರು ಜಿಲ್ಲೆ ಅತ್ಯಂತ ಹಿಂದುಳಿದ ಜಿಲ್ಲೆ ಇಲ್ಲಿನ ವಿದ್ಯಾರ್ಥಿಗಳು ವೃತ್ತಿ ಮಾರ್ಗದರ್ಶನ ಜೊತೆಗೆ ವಿದ್ಯಾರ್ಥಿಗಳು ಪರಿಶ್ರಮದ ಹಾದಿಯಲ್ಲಿ ಸಾಗಿದರೆ ಮಾತ್ರ ಸ್ಪರ್ಧಾತ್ಮಕ ಯಶಸ್ಸು ಗಳಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸೆಂಟರ್ ಫಾರ್ ಎಂಪ್ಲಾಯಿಮೆಂಟ್, ಅಪಾರುಚಿನಿಟಿಸ್ ಮತ್ತು ಲಡ್ಡಿಂಗ್ ಸಿಇಒಎಲ್ ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವೃತ್ತಿ ಮಾರ್ಗದರ್ಶನ, ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು,ವಿದ್ಯಾರ್ಥಿಗಳಲ್ಲಿ ಆತ್ಮಬಲ ಮೂಡಿಸುವ ತಂತ್ರ ಇಂದಿನ ಶಿಕ್ಷಣ ಪದ್ಧತಿಯಲ್ಲಿಲ್ಲ. ಆತ್ಮವಿಶ್ವಾಸದ ಕೊರತೆ ಮತ್ತು ಸೋಲಿನ ಕುರಿತ ಆತಂಕ ವಿದ್ಯಾರ್ಥಿಗಳನ್ನು ಕಾಡುತ್ತಿರುತ್ತದೆ.
ಇವೆರಡೂ ಅವರ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತವೆ. ಉತ್ತಮ ಆಲೋಚನೆಗಳನ್ನು ಮೈಗೂಡಿಸಿಕೊಂಡು ಒಳ್ಳೆಯ ಗುರಿ ಇರಿಸಿ ಮುಂದೆ ಸಾಗಿದರೆ ಯಶಸ್ಸು ಕಾಣಬಹುದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ವಿದ್ಯಾರ್ಥಿಗಳು ಮಾಹಿತಿ ಕಾರ್ಯಾಗಾರರನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳಲ್ಲಿ ವಿಶೇಷ ಸ್ಫೂರ್ತಿ, ಕಾಳಜಿ ಇರಬೇಕು. ಪರಿಶ್ರಮದಿಂದ ಮಾತ್ರ ಜೀವನದ ಗುರಿ ಮುಟ್ಟಲು ಸಾಧ್ಯ ಎಂದರು.
![]() |
![]() |
![]() |
![]() |
![]() |
[ays_poll id=3]