
ಮಾನ್ವಿ : ತಾಲೂಕಿನ ವಲಕಂದಿನ್ನಿ ಗ್ರಾಮದಲ್ಲಿ 3 ವರ್ಷದ ಪ್ರಜ್ವಲ್ ಎಂಬ ಬಾಲಕನ ಮೇಲೆ ಹಂದಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ.
ಹೌದು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಗೋರ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ವಲಕಂದಿನ್ನಿ ಗ್ರಾಮದಲ್ಲಿ, ಮನೆಯ ಮುಂದೆ ಆಡುತ್ತಿದ್ದ ಪ್ರಜ್ವಲ್ ಎಂಬ ಬಾಲಕನ ಮೇಲೆ ದಾಳಿ ಮಾಡಿದ ಹಂದಿ ಗಂಭೀರವಾಗಿ ಗಾಯಗೊಳಿಸಿದೆ. ಅಲ್ಲಿಯೇ ಇದ್ದ ಸಾರ್ವಜನಿಕರು ಬಾಲಕನನ್ನು ಹಂದಿಯಿಂದ ಬಿಡಿಸಿ ಕೂಡಲೇ ರಾಯಚೂರು ರಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಗ್ರಾಮದಲ್ಲಿ ಹಂದಿಗಳ ಹಾವಳಿ ಮಿತಿಮೀರಿ ಹೋಗಿದ್ದು ಹಲವು ಬಾರಿ ಪಂಚಾಯಿತಿ ಅಧಿಕಾರಿಗಳಿಗೆ ಹಂದಿಗಳನ್ನು ನಿಯಂತ್ರಣ ಮಾಡುವ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬುದು ಸ್ಥಳೀಯರ ದೂರಾಗಿದೆ. ಇನ್ನು ಇಂತಹ ಘಟನೆಗಳನ್ನು ಮರುಗೊಳಿಸಿದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕಿದೆ.
![]() |
![]() |
![]() |
![]() |
![]() |
[ays_poll id=3]