This is the title of the web page
This is the title of the web page
National News

ನಾಳೆ ಕಲಬುರ್ಗಿಗೆ ಪ್ರಧಾನಿ ಮೋದಿ ಆಗಮನ : ಡ್ರೋನ್ ಹಾರಾಟ ನಿಷೇಧ


K2kannadanews.in

PM to Kalburgi : ನಾಳೆ ಕಲಬುರ್ಗಿಗೆ (kalburgi) ಪ್ರಧಾನಿ ನರೇಂದ್ರ ಮೋದಿ (Narendra modi) ಆಗಮಿಸುತ್ತಿದ್ದಾರೆ. ಹಾಗಾಗಿ ವಿಮಾನ ನಿಲ್ದಾಣದ (Air Port) ಸುತ್ತ 10 ಕಿ.ಮೀ ವ್ಯಾಪ್ತಿ ಡ್ರೋನ್ ಕ್ಯಾಮೆರಾ (Dron camera) ಹಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಹೌದು ಭದ್ರತಾ ದೃಷ್ಟಿಯಿಂದ (security porous) ಸಿಆರ್ಪಿಸಿ ಸೆಕ್ಷನ್ 144ರ ಅಡಿ ಡ್ರೋನ್ ಕ್ಯಾಮರಾ ಹಾರಾಟ ನಿಷೇಧಿಸಿ ಜಿಲ್ಲಾಡಳಿತ (District Administration) ಕ್ರಮ ಕೈಗೊಂಡಿದೆ. ನಾಳೆ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ನಾಳೆ ಬೆಳಗ್ಗೆ 9:40ಕ್ಕೆ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ವಿಮಾನ ನಿಲ್ದಾಣದಿಂದ ನೇರವಾಗಿ ಮಹಾರಾಷ್ಟ್ರದ (Maharashtra) ಸೊಲ್ಲಾಪುರಕ್ಕೆ (Sollapur) ತೆರಳಿದ್ದು, ಅಲ್ಲಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಫಲಾನುಭವಿಗಳಿಗೆ ಹಕ್ಕು ಪತ್ರವನ್ನು ವಿತರಿಸಲಿದ್ದಾರೆ. ಸೋಲಾಪುರದಿಂದ ಮಧ್ಯಾನ ಒಂದು ಗಂಟೆಗೆ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.ನಾಳೆ ಮಧ್ಯಾಹ್ನ 1.05ಕ್ಕೆ ವಿಮಾನ ನಿಲ್ದಾಣದಲ್ಲಿ ಮೋದಿ ಬೆಂಗಳೂರಿಗೆ (Benglore) ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.


[ays_poll id=3]