
ರಾಯಚೂರು : ಅಕ್ರಮ ತಡಿಯಬೇಕಾದವರೇ ಅಕ್ರಮ ಮಾಡಿದಾಗ ಅದಕ್ಕೆ ಕಡಿವಾಣ ಹಾಕುವುದು ಅಸಾಧ್ಯ, ಜಿಲ್ಲೆಯಲ್ಲಿ ಬೇರೂರು ಇರುವ ಅಕ್ರಮ ಮರಣಗಾರಿಕೆ ಮತ್ತು ಮಟ್ಕಾ ದಂದೆಗೆ ಪೊಲೀಸರೇ ರಕ್ಷಕವಾಗಿದ್ದಾರೆ. ಪೊಲೀಸ್ ಅಧಿಕಾರಿಗಳು ಸ್ವಯಂ ನಿವೃತ್ತಿ ಪಡೆದು ಮರಳು ಅಕ್ರಮ ಸಾಗಣೆಯಲ್ಲಿ ತೊಡಗಿದ್ದಾರೆ ಎಂಬುದು ರಾಯಚೂರು ಜಿಲ್ಲೆಯ ಹಾಲಿ ಶಾಸಕರುಗಳ ಒಕ್ಕೂರಲಿನ ಧ್ವನಿಯಾಗಿದೆ.
ಜಿಲ್ಲೆಗೆ ಪೊಲೀಸ್ ಅಧಿಕಾರಿಯಾಗಿ ನೇಮಕಗೊಂಡ ಕೆಲಪಿಎಸ್ಐ ಗಳು ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟು ಸ್ವಯಂ ನಿವೃತ್ತಿ ಪಡೆದು, ತಾವೇ ಜೆಸಿಬಿ ಹಾಗೂ ಟಿಪ್ಪರ್‌ಗಳನ್ನು ಖರೀದಿಸಿ ನೆರೆಯ ಆಂಧ್ರಪ್ರದೇಶಕ್ಕೆ ಮರಳು ಸಾಗಣೆ ಮಾಡುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳಿಗೆ ಅಷ್ಟೇ ಅಲ್ಲ, ಇತರ ಅಧಿಕಾರಿಗಳಿಗೂ ಗೊತ್ತಿದೆ. ಆದರೆ, ಹಿರಿಯ ಪೊಲೀಸ್ ಅಧಿಕಾರಿಗಳು ಅಂಥವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಶಾಸಕರು ಒಕ್ಕೊರಲಿನಿಂದ ಪೊಲೀಸ್ ಇಲಾಖೆ ವಿರುದ್ಧ ಧ್ವನಿ ಎತ್ತಿದರು. ಅಧಿಕಾರಿಗಳು ದುರ್ಬಲವಾಗಿರುವ ಕಾರಣಕ್ಕಾಗಿಯೇ ಮರಳು ಅಕ್ರಮ ಸಾಗಣೆ ಮಾಫಿಯಾದವರು ಕಾನ್‌ಸ್ಟೆಬಲ್‌ಗಳ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ದೇವದುರ್ಗದಲ್ಲಿ ಮೂವರು ಕೂಲಿ ಕಾರ್ಮಿಕರು ಪ್ರಾಣ ಸಹ ಕಳೆದುಕೊಂಡಿದ್ದಾರೆ. ಅಕ್ರಮ ಮರಳು ಸಾಗಣೆ ದಂಧೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ಅಧಿಕಾರಿಗಳು ದುರ್ಬಲವಾಗಿರುವ ಕಾರಣಕ್ಕಾಗಿಯೇ ಮರಳು ಅಕ್ರಮ ಸಾಗಣೆ ಮಾಫಿಯಾದವರು ಕಾನ್‌ಸ್ಟೆಬಲ್‌ಗಳ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ದೇವದುರ್ಗದಲ್ಲಿ ಮೂವರು ಕೂಲಿ ಕಾರ್ಮಿಕರು ಪ್ರಾಣ ಸಹ ಕಳೆದುಕೊಂಡಿದ್ದಾರೆ. ಅಕ್ರಮ ಮರಳು ಸಾಗಣೆ ದಂಧೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯಲ್ಲಿ ಹಿಂದೆ ಮರಳು ಮಾಫಿಯಾದವರು ಗ್ರಾಮ ಲೆಕ್ಕಾಧಿಕಾರಿ ಮೇಲೆ ಟಿಪ್ಪರ್ ಹಾಯಿಸಿದ್ದರು. ರಾಯಚೂರಿನಿಂದ ಆಂಧ್ರಪ್ರದೇಶಕ್ಕೆ ಅಕ್ರಮ ಮರಳು ಸಾಗಣೆಯಾಗುತ್ತಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ತರಲಾಗಿದೆ. ಹಿರಿಯ ಅಧಿಕಾರಿಗಳೇ ಮೌನಕ್ಕೆ ಶರಣಾದರೆ ಏನು ಮಾಡಬೇಕು ಎಂದು ಶಾಸಕ ಬಸನಗೌಡ ದದ್ದಲ್ ಪ್ರಶ್ನಿಸಿದರು.
ದೇವದುರ್ಗದಲ್ಲಿ ಮರಳು ಅಕ್ರಮ ಸಾಗಣೆ, ಮಟ್ಕಾ, ಜೂಜಾಟ ವ್ಯಾಪಕವಾಗಿ ನಡೆದಿದೆ. ಅದಕ್ಕೆ ಕಡಿವಾಣ ಹಾಕಬೇಕು. ದೇವದುರ್ಗದಲ್ಲಿ ಈಚೆಗೆ ಮೂವರು ಸಾವಿಗೀಡಾದ ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ದೇವದುರ್ಗ ಶಾಸಕಿ ಕರೆಮ್ಮ ಒತ್ತಾಯಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಮಾತನಾಡಿ,ಕಳೆದ ವರ್ಷ ಒಟ್ಟು 314 ಪ್ರಕರಣ ದಾಖಲಿಸಿಕೊಂಡು 42 ಲಕ್ಷ ದಂಡ ವಿಧಿಸಲಾಗಿದೆ. ಕಂದಾಯ, ಲೋಕೋಪಯೋಗಿ, ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಕಾರ್ಯಪಡೆ ರಚಿಸಲಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಅಕ್ರಮ ಮರುಳು ದಂಧೆ, ಮಟ್ಕಾ, ಜೂಜಾಟದಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಿ ಕಾರ್ಯನಿರ್ವಹಿಸಬೇಕು. ಆಮಿಷಕ್ಕೆ ಒಳಗಾಗದೇ ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
![]() |
![]() |
![]() |
![]() |
![]() |
[ays_poll id=3]