
K2 ನ್ಯೂಸ್ ಡೆಸ್ಕ್ : ವಿಶಿಷ್ಟ ಶೈಲಿಯಲ್ಲಿ ನಿರ್ಮಾಣವಾಗಿರುವಂತಹ ಹೊಸ ಸಂಸತ್ ಭವನದಲ್ಲಿ ಕೇಂದ್ರ ಬಿ ಜೆ ಪಿ ಸರ್ಕಾರ ಈ ಬಾರಿ ಬಜೆಟ್ ಮಂಡನೆ ಮಾಡುವ ಸಾಧ್ಯತೆಗಳಿವೆ.
ಈ ಬಾರಿಯ ಕೇಂದ್ರ ಬಜೆಟ್ ಅನ್ನು ಹೊಸ ಸಂಸತ್ ಭವನದಲ್ಲಿ ಮಂಡಿಸುವ ಸಾಧ್ಯತೆಗಳಿವೆ. ಇದಕ್ಕೆ ಸಂಬಂಧಿಸಿದ ಸಿದ್ಧತೆಗಳು ಭರದಿಂದ ಸಾಗಿವೆ ಎಂದು ವರದಿಯಾಗಿದೆ. ಭವನದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜನವರಿ ಅಂತ್ಯದ ವೇಳೆಗೆ ಸಿದ್ಧಗೊಳ್ಳುವ ನಿರೀಕ್ಷೆಯಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ ಮಂಡಿಸಲಿದ್ದು, ಮಧ್ಯಮ ವರ್ಗದ ಜನರು 2024 ರ ಚುನಾವಣೆಯ ಮೊದಲು ಮೋದಿ ಸರ್ಕಾರದ ಕೊನೆಯ ಪೂರ್ಣ ಬಜೆಟ್ ಮೇಲೆ ಹೆಚ್ಚು ಭರವಸೆ ಇಟ್ಟುಕೊಂಡಿದ್ದಾರೆ.
![]() |
![]() |
![]() |
![]() |
![]() |
[ays_poll id=3]