K2kannadanews.in
PM Narendra modi ರಾಯಚೂರು : ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಇಂದು 50 ಹಾಸಿಗೆಗಳ ತೀವ್ರ ನಿಘಾ ಘಟಕದ ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.
ಇಂದು ರಾಯಚೂರು ನಗರದ ರಿಮ್ಸ್ ಆಸ್ಪತ್ರೆಯಲ್ಲಿ PM-ABHIM ಯೋಜನೆಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ 60-40 ಅನುದಾನದ ಅಡಿಯಲ್ಲಿ, 50 ಹಾಸಿಗೆಗಳ ತೀವ್ರ ನಿಘಾ ಘಟಕದ ಕಟ್ಟಡಕ್ಕೆ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆಯನ್ನು ನೀಡಿದರು. ಈ ವೇಳೆ ಕಾರ್ಯಕ್ರಮದಲ್ಲಿ ರಾಯಚೂರು ನಗರ ಶಾಸಕ ಡಾ. ಶಿವರಾಜ ಪಾಟೀಲ್, ಡಿ ಎಚ್ ಓ, ರಿಮ್ಸ್ ಆಸ್ಪತ್ರೆ ನಿರ್ದೇಶಕರು, ಸೇರದಂತೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.