K2kannadanews.in
Students protest ಮಾನ್ವಿ : ಬಡ್ಡಿ ಸಮೇತ ಫೀಸ್ ವಸೂಲಿ ಮಾಡಿ ಮೂಲಭೂತ ಸೌಲಭ್ಯ ನೀಡದೆ ಕಿರುಕುಳ ನೀಡುತ್ತಿದ್ದ ಆಡಳಿತ ಮಂಡಳಿ ವಿರುದ್ಧ ಮಧ್ಯ ರಾತ್ರಿಯಿಂದಲೇ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ ಘಟನೆ ಮಾನ್ವಿಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಇರುವ ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಮಧ್ಯರಾತ್ರಿ ವಿದ್ಯಾರ್ಥಿನಿಯರು ಪ್ರತಿಭಟನೆ ಮಾಡಿದ್ದಾರೆ. ಬಡ್ಡಿ ಸಮೇತ ಕಾಲೇಜು ಫೀ ವಸೂಲಿ ಮಾಡುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿ, ರಾತ್ರಿಯಿಡೀ ಕೆ ಪಿ ಎಸ್ ವಿ ಎಸ್ ಆಯುರ್ವೇದಿಕ್ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ಮಾಡಿದ್ದಾರೆ.
ಇನ್ನೂ ಆಡಳಿತ ಮಂಡಳಿಯಿಂದ ಅನಧಿಕೃತವಾಗಿ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿದ್ದಾರೆ, ಕಾಲೇಜಿನ ಶುಲ್ಕ ಪಾವತಿ ವಿಳಂಬವಾದರೆ ಬಡ್ಡಿ ಸಮೇತ ಪಾವತಿಸಲು ಕಿರುಕುಳ ನೀಡುತ್ತಿದ್ದಾರೆ. ಜೊತೆಗೆ ಹಾಸ್ಟೆಲ್‌ನಲ್ಲಿ ಮೂಲಭೂತ ಸೌಲಭ್ಯವೂ ಯಾವುದು ನೀಡುತ್ತಿಲ್ಲ, ಕಳೆದ ಒಂದು ವಾರದಿಂದ ನೀರು ತಾವೇ ಹೊತ್ತು ತರುತ್ತಿರುವ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು. ದಿನೇದಿನೇ ಆಡಳಿತ ಮಂಡಳಿಯಿಂದ ವಿದ್ಯಾರ್ಥಿಗಳ ಮೇಲೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಸಿಟ್ಟಿಗೆದ್ದ ವಿದ್ಯಾರ್ಥಿಗು ರಾತ್ರೋರಾತ್ರಿ ಪ್ರತಿಭಟನೆ ಮಾಡಿದರು. ವಿಷಯ ತಿಳಿಯುತ್ತಿದ್ದಂತೆ ಮಾನ್ವಿ ಪಿಎಸ್ಐ ವೀರನಗೌಡ ಭೇಟಿನೀಡಿ ಸಮಸ್ಯೆ ಬಗೆಹರಿಸುವಂತೆ ಆಡಳಿತ ಮಂಡಳಿಗೆ ಸೂಚಿಸಿದ್ದಾರೆ.