This is the title of the web page
This is the title of the web page
Local News

ರೈತರಿಂದ ಪ್ರತಿಭಟನೆ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಯತ್ನ


ರಾಯಚೂರು : ಮಾರುಕಟ್ಟೆಯಲ್ಲಿ ಹತ್ತಿ ದರ ಇಳಿಕೆ ಖಂಡಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಮತಿ ಸರಕಾರ ವಿರುದ್ಧ ಘೋಷಣೆ ಕೂಗುತ್ತಾ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆಗೆ ಯತ್ನಿಸಿದರು.

ನಗರದ ಅಂಬೇಡ್ಕರ್ ವೃತ್ತದ ಮೂಲಕ ನಗರಸಭೆ ಹಾಗೂ ಜಿಲ್ಲಾಧಿಕಾರಿ ಕಚೇರಿ ವರೆಗೂ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನಿಸಿದ ವೇಳೆ ರೈತರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟ ಘಟನೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಸ್ತೆ ತಡೆ ನೆಡಸಿ ಸರಕಾರ ವಿರುದ್ಧ ಘೋಷಣೆ ಕೂಗಿದರು. ರಸ್ತೆ ತಡೆಯಿಂದಾಗಿ ಕೆಲಕಾಲ ವಾಹನ ಸಂಚಾರಕ್ಕೆ ವ್ಯತ್ಯಯವಾಯಿತು. ಸಂಚಾರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡೆದರು. ಹತ್ತಿ ದರ ಏಕಾಏಕಿ ಇಳಿಕೆಯಿಂದ ರೈತರು ಕಂಗಾಲುಗಿದ್ದಾರೆ. ಪ್ರತಿಭಟನೆ ನಿರಿತ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ತಕ್ಷಣವೇ ಮದ್ಯೆ ಪ್ರವೇಶಸಿ ರೈತರಿಗೆ ನ್ಯಾಯ ಒದಗಿಸುವಂತೆ ರೈತರು ಪಟ್ಟು ಹಿಡಿದ ಘಟನೆ ನಡೆಯಿತು.

ಪ್ರತಿ ತಾಲೂಕು ಕೇಂದ್ರಗಳಲ್ಲಿ ಹತ್ತಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ ಪ್ರತಿ ಕ್ವಿಂಟಲ್ 12 ಸಾವಿರ ದರ ನಿಗದಿ ಪಡಿಸುವಂತೆ ರೈತರು ಒತ್ತಾಯಿಸಿದರು.
ಸರ್ಕಾರವೇ ಬೆಳೆಗಳನ್ನು ಖರೀದಿಸಿ, ರೈತರಿಗೆ ಪ್ರತಿ ಎಕರೆಗೆ ತಗಲುವ ವೆಚ್ಚವನ್ನು ಒಳಗೊಂಡು ಒಂದುವರೆ ಪಟ್ಟು ಬೆಂಬಲ ಬೆಲೆಯನ್ನು ಸೇರಿಸಿ ಬೆಲೆ ನಿಗದಿ ಮಾಡಲು ಎಂಎಸ್‌ಪಿಯನ್ನು ಕಾನೂನು ಬದ್ದಗೊಳಿಸಬೇಕೆಂದು ಒತ್ತಾಯಿಸಿ ಅನೇಕ ಭಾರಿ ಹೋರಾಟ ನಡೆಸಿದರು ಸರಕಾರ ಎಚ್ಚೆತ್ತುಕೊಂಡಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ರೈತರು ಬಗ್ಗೆ ಸರಕಾರಕ್ಕೆ ಕಾಳಜಿ ಇಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಬಿಜೆಪಿ ಸರಕಾರ ವಿರುದ್ಧ ರೈತರು ತೀವ್ರ ಆಕ್ರೋಶಗೊಂಡರು.


[ays_poll id=3]