K2kannadanews.in
Local News ರಾಯಚೂರು : ಇತ್ತೀಚೆಗೆ ಬೀದಿ ನಾಯಿಗಳ ಜಗಳದಿಂದ ಮೃತಪಟ್ಟಿದ್ದ ಮಹಾದೇವಿ ಎಂಬ ಯುವತಿ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಸಿಪಿಎಂ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
ರಾಯಚೂರು ನಗರದ ಮಡ್ಡಿಪೇಟೆ ಬಡಾವಣೆಯ ನಿವಾಸಿ ಮಹಾದೇವಿ ಎಂಬ ಯುವತಿ ಬೀದಿನಾಯಿಗಳ ಜಗಳದಲ್ಲಿ ಕೆಳಗೆ ಬಿದ್ದು ಮೃತಪಟ್ಟಿದ್ದಳು. ಬಡತನದ ಕಾರಣ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗದೆ ಕುಟುಂಬ ಮಗಳನ್ನು ಕಳೆದುಕೊಂಡಿದ್ದಾರೆ. ನಗರಸಭೆ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಅಸಮಧಾನ ವ್ಯಕ್ತಪಡಿಸಿ. ಬಡ ಕುಟುಂಬಕ್ಕೆ 20 ಲಕ್ಷ ಪರಿಹಾರ ಒದಗಿಸುವಂತೆ ಆಗ್ರಹಿಸಿ, ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ನಗರದ ಕೊಳಚೆ ಪ್ರದೇಶಗಳಲ್ಲಿ, ಮುಖ್ಯ ರಸ್ತೆಗಳಲ್ಲಿ ನಾಯಿಗಳು ದಾಳಿ ತೀವ್ರವಾಗಿದೆ. ನಾಯಿಗಳ ಕಾಟದಿಂದಾಗಿ ಮಕ್ಕಳನ್ನು ಹೊರ ಬಿಡಲು ಸಾಧ್ಯವಾಗುತ್ತಿಲ್ಲ. ಹಿಂದೆ ಅನೇಕ ಮಕ್ಕಳ ಮೇಲೆ ನಾಯಿಗಳ ದಾಳಿ ಆಗಿವೆ. ಆದರೂ ನಗರಸಭೆ ಮತ್ತು ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ.