ಹೆದ್ದಾರಿ ತಡೆದು ಗ್ರಾಮಸ್ಥರ ಪ್ರತಿಭಟನೆ
![]() |
![]() |
![]() |
![]() |
![]() |
ಸಿಂಧನೂರು : ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರವಾಹನ ಸಮಾರರ ಮೇಲೆ ಹರಿದ ಟಿಪ್ಪರ್ ಹರಿದು ಇಬ್ಬರು ವ್ಯಕ್ತಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸಾಸಲಮರಿ ಗ್ರಾಮಸ್ಥರು ಎರಡು ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿ ಪೊಲೀಸ್ರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಲಾರಿ ಚಾಲಕನ ನಿರ್ಲಕ್ಷದಿಂದ ಘಟನೆ ನಡೆದಿದ್ದು ಕೂಡಲೇ ಈ ಒಂದು ಲಾರಿಗೆ ಸಂಬಂಧಿಸಿದ ರೈಲ್ವೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪ್ರತಿಭಟರು ಪಟ್ಟು ಹಿಡಿದಿದ್ದರು. ಈ ವೇಳೆ ಎರಡು ಗಂಟೆ ಕಳೆದರೂ ಸ್ಥಳಕ್ಕೆ ಬಾರದ ಪೊಲೀಸ್ ಅಧಿಕಾರಿಗಳ ವಿರುದ್ಧವು ಅಸಮಾಧಾನ ವ್ಯಕ್ತವಾಯಿತು. ಸ್ಥಳಕ್ಕೆ ಆಗಮಿಸಿದ ನಗರ ಪಿಎಸ್ಐ ಸೌಮ್ಯ ಹಿರೇಮಠ ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಿಕ್ಕಮಕಿ ಕೂಡ ನಡೆಯಿತು.
ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಬರದೇ ಇದ್ದರೆ ಒಂದು ಪ್ರತಿಭಟನೆ ನಿಲ್ಲಿಸುವ ಪ್ರಶ್ನೆ ಇಲ್ಲ ಎಂದು ಪಟ್ಟು ಹಿಡಿದ ಕಾರಣ ಸಾಕಷ್ಟು ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೊನೆಗೂ ಇಲಾಖೆ ಅಧಿಕಾರಿಗಳನ್ನು ಕರೆಸಿ ಘಟನೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿ ಪ್ರತಿಭಟನಾಕಾರರ ಮನವೊಲಿಸಲಾಯಿತು.
![]() |
![]() |
![]() |
![]() |
![]() |